ಕೆ.ಆರ್.ಪೇಟೆ…
ಕೌಟುಂಬಿಕ ಕಲಹ ನವದಂಪತಿ ನೇಣಿಗೆ ಶರಣು…
ಪಟ್ಟಣದ ಜಯನಗರ ಬಡಾವಣೆಯ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸಮುದಾಯ ಭವನದ ಪಕ್ಕದಲ್ಲಿರುವ ಬಾಡಿಗೆ ಮನೆಯಲ್ಲಿ ದಂಪತಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಲೂಕಿನ ಬೂಕನಕೆರೆ ಹೋಬಳಿಯ ಹೊಸಕೋಟೆ ಗ್ರಾಮದ ಗಣೇಶಗೌಡ ಮತ್ತು ಮಂಜುಳಾ ದಂಪತಿಗಳ ಪುತ್ರ ದರ್ಶನ್ (29) ಮತ್ತು ದರ್ಶನ್ ಪತ್ನಿ ಎನ್.ಎಲ್.ದಿವ್ಯ(25) ಮೃತ ದಂಪತಿಗಳು ಎಂದು ತಿಳಿದು ಬಂದಿದೆ.ಬೂಕನಕೆರೆ ಹೋಬಳಿಯ
ನಾಟನಹಳ್ಳಿ ಗ್ರಾಮದ ಲಕ್ಷ್ಮಣಗೌಡ ಮತ್ತು ಸುನಂದ ದಂಪತಿಗಳ ಪುತ್ರಿಯನ್ನು ಕಳೆದ ಮೂರು ವರ್ಷಗಳ ಹಿಂದೆ ದರ್ಶನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು.
ಈ ದರ್ಶನ್- ದಿವ್ಯ ದಂಪತಿಗಳಿಗೆ ಎರಡು ವರ್ಷದ ಹೆಣ್ಣು ಮಗುವಿದ್ದು ಅದೃಷ್ಟವಶಾತ್ ಮಗು ಬದುಕುಳಿದಿದೆ
ದಿವ್ಯ ಮತ್ತು ದರ್ಶನ್ ದಂಪತಿಗಳು ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ..
ಘಟನಾ ಸ್ಥಳಕ್ಕೆ ಕೆ.ಆರ್.ಪೇಟೆ ಟೌನ್ ಇನ್ಸ್ ಪೆಕ್ಟರ್ ಸುನಿಲ್ ಕುಮಾರ್ ಬೇಟಿ ನೀಡಿ ಪರಿಶೀಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.


