Tuesday, October 27, 2026
spot_img

ಜ್ಯಾದಳ-ಬಿಜೆಪಿ ಹೊಡೆತಕ್ಕೆ ಕಾಂಗ್ರೇಸ್ ನ ಪುಟ್ಟಣ್ಣ ಬಲಿ

ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎ.ಪಿ. ರಂಗನಾಥ್ ಗೆಲುವು
ಬೆಂಗಳೂರು ನಗರ ಜಿಲ್ಲೆ, ಅ.27, (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ ಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಬೆಂಗಳೂರು ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ತಿಳಿಸಿದ್ದಾರೆ.

ಅಕ್ಟೋಬರ್ 23 ರಂದು ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನದಲ್ಲಿ ಒಟ್ಟು 27,405 ಮತದಾರರ ಪೈಕಿ 22,468 ಮಂದಿ ಮತ ಚಲಾಯಿಸಿದ್ದು, ಶೇ.81.98ರಷ್ಟು ಮತದಾನವಾಗಿತ್ತು. ಮತ ಚಲಾಯಿಸಿದವರಲ್ಲಿ 8,360 ಪುರುಷರು ಹಾಗೂ 14,108 ಮಹಿಳೆಯರು.

ಅ.27ರ ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ವೀದಿಯಲ್ಲಿರುವ ಸರ್ಕಾರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆದಿದ್ದು,
ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಎ.ಪಿ. ರಂಗನಾಥ್ ಅವರು ಗೆಲುವು ಸಾಧಿಸಿದ್ದಾರೆ. ಮತ ಎಣಿಕೆಯ ವಿವಿಧ ಸುತ್ತುಗಳಲ್ಲಿ ಎ.ಪಿ. ರಂಗನಾಥ್ ಅವರು ಮುನ್ನಡೆ ಕಾಯ್ದುಕೊಂಡಿದ್ದು, ಅಂತಿಮವಾಗಿ ಗೆಲುವಿನ ಗರಿ ಮುಡಿಗೇರಿಸಿಕೊಂಡಿದ್ದಾರೆ.

ಕೊನೆಯ ಸುತ್ತಿನ ಮತ ಎಣಿಕೆಯಲ್ಲಿ ಎ.ಪಿ. ರಂಗನಾಥ್ ಅವರು 10810 ಮತಗಳನ್ನು ಪಡೆದರೆ, ಕಾಂಗ್ರೆಸ್ ಪಕ್ಷದ ಪುಟ್ಟಣ್ಣ ಅವರು 9902 ಮತಗಳನ್ನು ಪಡೆದಿದ್ದರು. ಈ ಸುತ್ತಿನಲ್ಲಿ ರಂಗನಾಥ್ ಅವರು 908 ಮತಗಳ ಮುನ್ನಡೆ ಸಾಧಿಸಿದ್ದರು.

ಇತರೆ ಅಭ್ಯರ್ಥಿಗಳ ಪೈಕಿ ಕರ್ನಾಟಕ ರಾಷ್ಟ್ರ ಸಮಿತಿಯ ಅಭ್ಯರ್ಥಿಯಾದ
ಡಾ. ಜಿ.ಆರ್. ಹೆಬ್ಬೂರು 94 ಮತಗಳು, ಪಕ್ಷೇತರ ಅಭ್ಯರ್ಥಿಯಾದ ಉಮೇಶ್ ಬಾಬು ಪಿಳ್ಳೆಗೌಡ 215 ಮತಗಳು, ಪಕ್ಷೇತರ ಅಭ್ಯರ್ಥಿಯಾದ ಬಿ .ಎಸ್. ನಾಗರಾಜು 11 ಹಾಗೂ ಪಕ್ಷೇತರ ಅಭ್ಯರ್ಥಿಯಾದ ಡಾ. ಎನ್. ಲಕ್ಷ್ಮಣ ಸ್ವಾಮಿ ಅವರು 24 ಮತಗಳನ್ನು ಪಡೆದಿದ್ದಾರೆ.

ಒಟ್ಟು 20616 ಮತಗಳು ಮಾನ್ಯವಾಗಿದ್ದು, 1857 ಮತಗಳು ತಿರಸ್ಕೃತಗೊಂಡಿದೆ ಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಂಗಳೂರು ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಸ್ಪರ್ಧಿಸಿದ್ದ ಎನ್ ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ. ಅತಿಯಾದ ಆತ್ಮವಿಶ್ವಾಸದಿಂದ ಪುಟ್ಟಣ್ಣ ಅವರಿಗೆ ಸೋಲಾಗಿದೆ ಎಂದು ಶಿಕ್ಷಕರ ವಲಯದಲ್ಲಿ ಚರ್ಚೆ ಶುರುವಾಗಿದೆ. ಎರಡು ಬಾರಿ ಸೋತಿದ್ದ ಎ.ಪಿ. ರಂಗನಾಥ್ ಅವರಿಗೆ ಗೆಲುವಾಗಿದೆ. ಒಟ್ಟಿನಲ್ಲಿ ಈ ಚುನಾವಣೆಯ ಫಲಿತಾಂಶ ಮುಂದಿನ ದಿನಗಳಲ್ಲಿ ನಡೆಯುವ 2028ರ ವಿಧಾನ ಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆಯೆ ಎಂಬುದನ್ನು ಕಾಲ ನಿರ್ಧರಿಸಬೇಕಿದೆ. ಮುಖ್ಯಮಂತ್ರಿ ಸ್ವಕ್ಷೇತ್ರದ ಅಭ್ಯರ್ಥಿಯಾಗಿಯೂ ಪುಟ್ಟಣ್ಣ ಅವರಿಗೆ ಸೋಲಾಗಿರುವುದಕ್ಕೆ ಕಾರಣಗಳನ್ನು ಹುಡುಕಲಾಗುತ್ತಿದೆ. ಯಾವುದೆ ಪಕ್ಷಕ್ಕು ವಲಸೆ ಹೋದರು ಶಿಕ್ಷಕರಿಗೆ ಮೇವು ಹಾಕಿ ಗೆಲುವು ಕಾಣುತ್ತಿದ್ದ ಪುಟ್ಟಣ್ಣರಿಗೆ ಈ ಸಾರಿ ಬಿಜೆಪಿ ಜ್ಯಾದಳ ಒಟ್ಟಾಗಿ ನೀರು ಕುಡಿಸಿವೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!