*ವಿದ್ಯುತ್ ತಂತಿ ತುಳಿದು ಮಹಿಳೆ ಸಾವು*
ಕಿಕ್ಕೇರಿ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿರುವ ಘಟನೆ ಕಿಕ್ಕೇರಿ ಹೋಬಳಿ ಲಕ್ಷ್ಮೀಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಗಾಯಿತ್ರಮ್ಮ (45) ಎಂಬ ಮಹಿಳೆ ವಿದ್ಯುತ್ ಸ್ಪರ್ಷದಿಂದ ಸಾವನ್ನಪ್ಪಿದ್ದು, ಅವರು ಶನಿವಾರ ಬೆಳಗ್ಗೆ 6.30 ಸಮಯದಲ್ಲಿ ಗ್ರಾಮದ ಪಕ್ಕದಲ್ಲೇ ಇದ್ದ ತಮ್ಮ ಜಮೀನಿಗೆ ಹೋದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಮೃತ ಪಟ್ಟಿದ್ದಾರೆ.
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯಿಂದಾಗಿ ಈ ಅವಘಢ ಸಂಭವಿಸಿದ್ದು, ಮಹಿಳೆ ವಿದ್ಯುತ್ ತಂತಿಯನ್ನು ಗಮನಿಸಿದೆ ತುಳಿದು ಸಾವನ್ನಪ್ಪಿದ್ದಾಳೆ.
ವಿಷಯ ತಿಳಿದ ಕಿಕ್ಕೇರಿ ಪೋಲೀಸ್ ಠಾಣೆಯ ಪಿಎಸೈ ರೇವತಿ, ಚೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂಧಿಗಳ ತಂಡ ಘಟನಾ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನೆಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತ ಮಹಿಳೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆ ರವಾನಿಸಲಾಗಿದೆ.