Tuesday, October 15, 2024
spot_img

ಕೃಷ್ಣರಾಜ ಪೇಟೆ:ಸಂಗೊಳ್ಳಿ ರಾಯಣ್ಣನ ಪ್ರತಿಮೆ ಹಾನಿಗೊಳಿಸಿದ ದುಷ್ಕರ್ಮಿಗಳು

ಕೃಷ್ಣರಾಜ ಪೇಟೆ:ಕಿಡಿಗೇಡಿಗಳಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ

ಮೇ.೮.ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬಿಕನಹಳ್ಳಿ ಗ್ರಾಮದ ಸಂಗೊಳ್ಳಿ ರಾಯಣ್ಣ ಯುವ ಬ್ರಿಗೇಡ್ ವತಿಯಿಂದ ನಿರ್ಮಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮಂಗಳವಾರ ತಡರಾತ್ರಿ ಕಿಡಿಗೇಡಿಗಳು ಹಾನಿಗೊಳಿಸಿದ್ದಾರೆ. ಸಂಗೊಳ್ಳಿ ರಾಯಣ್ಣನ ಕತ್ತಿ.ಕೈ.ಕಾಲು ಸೇರಿದಂತೆ ವಿವಿಧ ಭಾಗದಲ್ಲಿ ಹಾನಿಗೊಳಿಸಿ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿರುವ ಘಟನೆ ಜರುಗಿದೆ.

ಘಟನೆಯ ಕುರಿತು ಮಾತನಾಡಿದ ಗ್ರಾಮದ ಮುಖಂಡ ಬಿಕನಹಳ್ಳಿ ಹಿರೇಗೌಡ ಸರ್ವ ಸಮುದಾಯ ನಾಯಕ ಮತ್ತು ಸ್ವತಂತ್ರಕ್ಕಾಗಿ ಹೋರಾಡಿದ ದೇಶಭಕ್ತ ಶ್ರೀ ಸಂಗೊಳ್ಳಿ ರಾಯಣ್ಣನ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂಬ ದೂರ ದೃಷ್ಟಿಯಿಂದ ಅವರ ಪ್ರತಿಮೆಯನ್ನು ಗ್ರಾಮಸ್ಥರ ಸಹಕಾರದಿಂದ ಯುವಕರು ಗ್ರಾಮದಲ್ಲಿ ಒಂದು ವರ್ಷದ ಹಿಂದಷ್ಟೆ ಪ್ರತಿಮೆಯನ್ನು ಸ್ಥಾಪಿಸಿದ್ದರು.

ಕಿಡಿಗೇಡಿಗಳು ತಡರಾತ್ರಿ ರಾಯಣ್ಣನ ಕತ್ತಿ ಮತ್ತು ಕಾಲು. ಕೈ ಭಾಗಕ್ಕೆ ಹಾನಿಗೊಳಿಸಿ ವಿಕೃತಿ ಮೆರೆದಿದ್ದಾರೆ ದೇಶಕ್ಕಾಗಿ ಬಲಿದಾನವಾದ ಮಹನೀಯರ ಮೇಲೆ ವಿಕೃತಿ ಮೆರೆದಿರುವ ದುಷ್ಕರ್ಮಿಗಳನ್ನ ಸರ್ಕಾರ ಶೀಘ್ರವೇ ಬಂಧಿಸಬೇಕು. ಈ ಮಹನೀಯರು ಒಂದು ಸಮುದಾಯಕ್ಕೆ ಸೀಮಿತವಲ್ಲ ಇವರ ತತ್ವ ಆದರ್ಶ ಹೋರಾಟ ಹಾದಿಗಳ ಮೂಲಕ ಸರ್ವ ಸಮುದಾಯದ ಜನರ ಮನದಾಂಗಲದಲ್ಲಿ ನೆಲೆಸಿದ್ದಾರೆ. ಇಂತಹ ಮಹನೀಯರಿಗೆ ರಾಜ್ಯದಲ್ಲಿ ಹಲವು ಕಡೆ ಕಿಡಿಗೇಡಿಗಳು ಅವಮಾನಗೊಳಿಸಿದ್ದಾರೆ ಆ ಸಂದರ್ಭದಲ್ಲಿ ಘಟನೆಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಠಿಣ ಕ್ರಮ ಜರುಗಿಸಿದರೆ ನಮ್ಮ ಗ್ರಾಮದಲ್ಲಿ ಈ ಘಟನೆ ಜರುಗುತ್ತಿರಲಿಲ್ಲ ಈಗಲೂ ಕಾಲ ಮಿಂಚಿಲ್ಲ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಈ ಘಟನೆಗೆ ಕಾರಣರಾದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ.ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಈ ಪ್ರತಿಮೆ ಮುಂದೆ ನಮ್ಮ ಗ್ರಾಮಸ್ಥರು ಮತ್ತು ರಾಜ್ಯದ ರಾಯಣ್ಣನ ಅಭಿಮಾನಿಗಳು ಉಗ್ರ ಹೋರಾಟ ನಡೆಸಲು ಸಿದ್ಧರಿದ್ದೇವೆ ಎಂದು ಎಚ್ಚರಿಕೆ ನೀಡಿ. ದುಷ್ಕರ್ಮಿಗಳನ್ನ ಬಂಧಿಸಬೇಕು ಎಂದು ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಬಿಕನಹಳ್ಳಿ ಗ್ರಾಮಸ್ಥರು ಹಾಗೂ ಶ್ರೀ ಸಂಗೊಳ್ಳಿ ರಾಯಣ್ಣ ಯುವ ಬ್ರಿಗೇಡ್ ಯುವಕರು ಸೇರಿದಂತೆ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!