*ಸೆಪ್ಟೆಂಬರ್ 12 ಮತ್ತು 13ರಂದು ಮದ್ಯ ಮಾರಾಟ ನಿಷೇಧ*
ಮಂಡ್ಯ ಜಿಲ್ಲೆಯ ನಾಗಮಂಗಲ ಟೌನ್ ನಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಸೆಪ್ಟೆಂಬರ್ 12 ರ ಬೆಳಿಗ್ಗೆ 6 ಗಂಟೆಯಿಂದ ಸೆಪ್ಟೆಂಬರ್ 13 ರ ರಾತ್ರಿ 12 ಗಂಟೆಯವರೆಗೆ ನಾಗಮಂಗಲ ಟೌನ್ ಹಾಗೂ ಅದರ ಸುತ್ತಮುತ್ತಲಿನ 03 ಕಿ. ಮೀ. ವ್ಯಾಪ್ತಿಯಲ್ಲಿ ಬರುವ ಎಲ್ಲಾ ತರಹದ ಮದ್ಯದ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್ ಗಳನ್ನು ಮುಚ್ಚುವಂತೆ ಹಾಗೂ ಮದ್ಯ ಮಾರಾಟ, ಮದ್ಯ ಸಂಗ್ರಹಣೆ, ಮದ್ಯ ಸಾಗಾಣಿಕೆ ಮತ್ತು ಶೇಖರಣೆ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಕುಮಾರ ರವರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.