ಪಾಂಡವಪುರ : ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾರರು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಅವರು ಮೊದಲ ಪ್ರಾಶಸ್ತ್ಯದ ಮತಗಳಿಂದ ಶೇ.100ಕ್ಕೆ 100ರಷ್ಟು ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಮತಗಟ್ಟೆ ಕೇಂದ್ರಕ್ಕೆ ಭೇಟಿ ನೀಡಿದ ಅವರು ಶಿಕ್ಷಕ ಸಮುದಾಯ ಹಾಗೂ ಪಕ್ಷದ ಕಾರ್ಯಕರ್ತರಿಂದ ಮತದಾನದ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ನಮ್ಮ ಮೈತ್ರಿ ಅಭ್ಯರ್ಥಿ ಗೆಲುವು ಖಚಿತ ಎಂದರು.
ಜಿಲ್ಲೆಯ ಮದ್ದೂರು, ಮಳವಳ್ಳಿ, ಮಂಡ್ಯ, ನಾಗಮಂಗಲ, ಕೆ.ಆರ್.ಪೇಟೆ, ಶ್ರೀರಂಗಪಟ್ಟಣ ಹಾಗೂ ಪಾಂಡವಪುರ ತಾಲೂಕುಗಳಲ್ಲಿ ಪ್ರವಾಸ ನಡೆಸಿದಾಗ ಕ್ಷೇತ್ರದ ಮತದಾರರಿಂದ ಉತ್ತಮ ಪ್ರತಿಕ್ರಿಯೆ ಮೂಡಿಬಂದಿದೆ. ಹೀಗಾಗಿ ಮೈತ್ರಿ ಅಭ್ಯರ್ಥಿ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದರು.
1.25ಲಕ್ಷ ಮತಗಳಿಂದ ಕುಮಾರಸ್ವಾಮಿ ಗೆಲುವು : ಲೋಕಸಭೆ ಚುನಾವಣೆ ಫಲಿತಾಂಶ ಮಂಗಳವಾರ ನಡೆಯಲಿದೆಯಾದರೂ ಎನ್ ಡಿಎ ಅಭ್ಯರ್ಥಿ (ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಅಭ್ಯರ್ಥಿ) ಎಚ್.ಡಿ.ಕುಮಾರಸ್ವಾಮಿ ಈಗಾಗಲೇ ಸ್ಪಷ್ಟವಾಗಿ ಕ್ರಿಯರ್ ಆಗಿದ್ದು, ಅವರು 1.25ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಮೈಷುಗರ್ ಮಾಜಿ ಅಧ್ಯಕ್ಷ ಜೆ.ಶಿವಲಿಂಗೇಗೌಡ, ಜಿ.ಪಂ ಮಾಜಿ ಸದಸ್ಯ ಸಿ.ಅಶೋಕ್, ಜೆಡಿಎಸ್ ಮುಖಂಡರಾದ ಶ್ಯಾದನಹಳ್ಳಿ ಚಲುವರಾಜು, ದೇಶಹಳ್ಳಿ ಪ್ರಭಾಕರ್, ಗುರುಸ್ವಾಮಿ, ಜೆಡಿಎಸ್ ಅಧ್ಯಕ್ಷ ಬೆಳ್ಳಾಳೆ ಮಲ್ಲೇಶ್, ಬಿಜೆಪಿ ಕ್ಷೇತ್ರಧ್ಯಕ್ಷ ನೀಲನಹಳ್ಳಿ ಧನಂಜಯ, ಮಾಜಿ ಅಧ್ಯಕ್ಷ ಎಲ್.ಅಶೋಕ್, ರೈತಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಕನ್ನಂಬಾಡಿ ಸುರೇಶ್, ಮುಖಂಡರಾದ ಎಸ್ ಎನ್ ಟಿ ಸೋಮಶೇಖರ್, ಕೆ.ಎಲ್.ಆನಂದ್, ಕಾಂತರಾಜು, ಸೋಮಚಾರಿ, ಎಚ್.ಡಿ.ಶ್ರೀಧರ್, ರಾಮಲಿಂಗಂ, ಬಳಿಘಟ್ಟ ಅಶೋಕ್, ಶ್ರೀನಿವಾಸ್ ನಾಯಕ, ಎಲೆಕೆರೆ ಈರೇಗೌಡ, ಅರಕನಕೆರೆ ಪ್ರಕಾಶ್, ಬೀರಶೆಟ್ಟಹಳ್ಳಿ ಭಾಸ್ಕರ್, ಮಧು, ಮಲ್ಲೇಶ್ಇತರರಿದ್ದರು.