ಪುರಸಭೆ ನಿವೇಶನಗಳ ಅಕ್ರಮ ಕಬಳಿಕೆ ವಿರುದ್ಧ ಸಿಒಡಿ ತನಿಖೆ
ಪಾಂಡವಪುರ:ಆ೧೫. ಪುರಸಭೆ ವ್ಯಾಪ್ತಿಯಲ್ಲಿ ಹಂಚಿಕೆಯಾಗಿರುವ 2 ಸಾವಿರಕ್ಕೂ ಹೆಚ್ಚಿನ ನಿವೇಶನಗಳ ಅಕ್ರಮ ಕಬಳಿಕೆ ಮತ್ತು ಅವ್ಯವಹಾರಗಳನ್ನು ರಾಜ್ಯ ಸರ್ಕಾರ ಸಿಒಡಿ ತನಿಖೆಗೆ ಆದೇಶಿಸಿದ್ದು, ಅದರಂತೆ ಪೊಲೀಸರು ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮಾಹಿತಿ ಕಲೆ ಹಾಕುತ್ತಿದ್ದಾರೆ. ಪಾಂಡವಪುರ ಪಟ್ಟಣ ವ್ಯಾಪ್ತಿಯಲ್ಲಿ ೧೯೭೬ರಿಂದ ಇಲ್ಲಿಯವರೆಗೆ ಬಡವರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಪುರಸಭೆ ಆಡಳಿತ ಮಂಡಳಿ ಮತ್ತು ಆಶ್ರಯ ಸಮಿತಿ ಮೂಲಕ ಸುಮಾರು ೨೫೦೦ಕ್ಕೂ ಹೆಚ್ಚು ನಿವೇಶನಗಳನ್ನು ವಿತರಿಸಲಾಗಿದೆ. ಆದರೆ ಇದರಲ್ಲಿ ಬಹುತೇಕ ನಿವೇಶನಗಳನ್ನು ಪ್ರಭಾವಿಗಳು ಅಕ್ರಮವಾಗಿ ಕಬಳಿಸಿದ್ಧಾರೆ ಮತ್ತು ಒಂದೇ ನಿವೇಶನಕ್ಕೆ ಎರಡ್ಮೂರು ಹಕ್ಕು ಪತ್ರಗಳನ್ನು ವಿತರಿಸುವ ಮೂಲಕ ಮೂಲ ಫಲಾನುಭವಿಗಳನ್ನು ವಂಚಿಸಲಾಗಿದೆ. ಇದರಿಂದ ಸಾಕಷ್ಟು ಜನರು ಸಮಸ್ಯೆ ಎದುರಿಸುತ್ತಿದ್ದು, ಇಡೀ ಪ್ರಕರಣವನ್ನು ತನಿಖೆ ನಡೆಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗಿದೆ ಎಂದರು.
ಪಟ್ಟಣದಲ್ಲಿ ನಿವೇಶನ ಖರೀದಿಸುವ ಜನರು ದಾಖಲೆಗಳನ್ನು ಪರಿಶೀಲಿಸಿ ಎಚ್ಚರಿಕೆಯಿಂದ ಖರೀದಿಸಬೇಕು. ಜನರಿಗೆ ಅನ್ಯಾಯವಾಗಬಾರದು ಎಂಬ ದೃಷ್ಠಿಯಿಂದ ನಿವೇಶನ ನೋಂದಣಿಗೂ ಮುನ್ನ ಪುರಸಭೆಯಿಂದ ಎನ್‌ಒಸಿ ಪಡೆದುಕೊಳ್ಳುವಂತೆ ಸಬ್‌ರಿಜಿಸ್ಟರ್ ಅವರಿಗೆ ಸೂಚಿಸಲಾಗಿದೆ. ನಿವೇಶನಗಳ ಅರ್ಹ ಫಲಾನುಭವಿಗಳು ನಿವೇಶನ ಕಳೆದುಕೊಂಡಿದ್ದರೆ ಅವರಿಗೆ ನಿವೇಶನವನ್ನು ಹಿಂದಿರುಗಿಸಲು ಕ್ರಮ ವಹಿಸಲಾಗುವುದು. ಸಿಒಡಿ ತನಿಖೆ ಬಳಿಕ ಇಡೀ ಪಟ್ಟಣವನ್ನು ಸರ್ವೇ ಮಾಡಿಸಿ ಮುಂದೆ ಅಕ್ರಮ ನಡೆಯದಂತೆ ತಡಗಟ್ಟಲಾಗುವುದು ಎಂದರು.
ಪುರಸಭೆ ವ್ಯಾಪ್ತಿಯಲ್ಲಿ ಹಂಚಿರುವ ನಿವೇಶನ
ಅಕ್ರಮದಲ್ಲಿ ಭಾಗಿಯಾಗಿರುವ ತಪ್ಪಿತಸ್ಥರಿಗೆ ಕಾನೂನು ಕ್ರಮ ಖಚಿತ ಎಂದರಲ್ಲದೇ ತಾಲೂಕಿನಾದ್ಯಂತ ಕೆರೆ, ಕಟ್ಟೆ ಮತ್ತು ಹಳ್ಳಗಳನ್ನು ಒತ್ತುವರಿ ಮಡಿಕೊಂಡಿರುವವರು ತಾವಾಗಿಯೇ ಒತ್ತುವರಿ ತೆರವುಗೊಳಿಸಬೇಕು ನಿಮಗಾಗಿ, ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಅಂತರ್ಜಲ ಕಾಪಾಡಬೇಕಿದೆ. ಹೀಗಾಗಿ ಒತ್ತುವರಿ ತೆವುಗೊಳಿಸಿ ಕೆರೆ ಕಟ್ಟೆ ಉಳಿಸಿ ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ರೈತಸಂಘ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲೂಕು ಅಧ್ಯಕ್ಷ ನಾಗರಾಜು, ಸರ್ವೋದಯ ಕರ್ನಾಟಕ ಪಕ್ಷದ ತಾಲೂಕು ಅಧ್ಯಕ್ಷ ಎಸ್.ದಯಾನಂದ್, ಮುಖಂಡರಾದ ಚಿಕ್ಕಾಡೆ ಹರೀಶ್, ಸಿ.ಎನ್.ವಿಜೇಂದ್ರ, ಉಮಾಶಂಕರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ನಿರ್ದೇಶಕ ಎನ್.ಕೃಷ್ಣೇಗೌಡ ಇತರರಿದ್ದರು.