ಪಾಂಡವಪುರ : ಪಾದಚಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ತಾಲೂಕಿನ ಟಿ.ಎಸ್.ಛತ್ರ ಗ್ರಾಮದ ಶ್ರೀರಂಗಪಟ್ಟಣ-ಜೇವರ್ಗಿ ಹೆದ್ದಾರಿ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಗ್ರಾಮದ ನಿವಾಸಿ ಬಾಲರೇಗೌಡ ಬಿನ್ ಚೌಡೇಗೌಡ (60) ಎಂಬಾತ ಮೃತ ವ್ಯಕ್ತಿ.
ಬೈಕ್ ಡಿಕ್ಕಿಯಾದ ವೇಳೆ ಪಾದಚಾರಿ ಬಾಲರೇಗೌಡ ತೀವ್ರ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಕೊನೆಯುಸಿರೆಳೆದರು.
ಈ ಸಂಬಂಧ ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಪಟ್ಟಣದ ಉಪವಿಭಾಗೀಯ ಆಸ್ಪತ್ರೆ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರು ಶವ ಒಪ್ಪಿಸಲಾಯಿತು.