ಪಾಂಡವಪುರ : ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಂಡವಪುರ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಪಾಂಡವಪುರ ಪಟ್ಟಣದ ಆರೋಗ್ಯ ಇಲಾಖೆಯ ವಸತಿ ಗೃಹದಲ್ಲಿ ಈಚೆಗೆ ನಡೆದಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೆ.ಆರ್.ಪೇಟೆ ಪಟ್ಟಣದ ಜಗದೀಶಾಚಾರ್ ಅವರ ಪತ್ನಿ ಶೃತಿ ಬಂಧಿತ ಆರೋಪಿಯಾಗಿದ್ದಾರೆ.
ಆರೋಪಿ ಶೃತಿ ಅವರು ಸ್ಕ್ಯಾನಿಂಗ್ ಮೂಲಕ ಹೆಣ್ಣು
ಭ್ರೂಣ ಪತ್ತೆ ಮಾಡುವ ಕಾರ್ಯದಲ್ಲಿ ಭಾಗಿಯಾಗಿದ್ದಳು ಎನ್ನಲಾಗಿದೆ.
ಭ್ರೂಣ ಪತ್ತೆ ಮತ್ತು ಭ್ರೂಣ ಹತ್ಯೆ ಪ್ರಕರಣದಲ್ಲಿ ಇದುವರೆಗೂ 9ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಶೃತಿ ಅವರನ್ನು ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.