ಪಾಂಡವಪುರ : ಬೈಕ್ ಆಯತಪ್ಪಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಆರತಿ ಉಕ್ಕಡದ ಸಮೀಪ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕೆ.ಆರ್.ಪೇಟೆ ತಾಲೂಕಿನ ಮುರುಕನಹಳ್ಳಿ ಗ್ರಾಮದ ನಿವಾಸಿ ವೆಂಕಟೇಶ್ ಎಂಬುವವರ ಪತ್ನಿ
ಪಾರ್ವತಮ್ಮ ( 52) ಎಂಬಾಕೆ
ಮೃತ ಮಹಿಳೆ.
ವೆಂಕಟೇಶ್ ಅವರ ಪುತ್ರ ಗಿರೀಶ್ ಅವರ ಹೊಸ ಬೈಕ್ ಖರೀದಿಸಿದ್ದು, ತಾಯಿ ಪಾರ್ವತಮ್ಮ ಅವರನ್ನು ಬೈಕ್ ನಲ್ಲಿ ಕೂರಿಸಿಕೊಂಡು ಆರತಿ ಉಕ್ಕಡಕ್ಕೆ ಪೂಜೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಬೈಕ್ ಆಯತಪ್ಪಿ ಬಿದ್ದಿದೆ. ಪರಿಣಾಮ ಕೆಳಗೆ ಬಿದ್ದು ಗಂಭೀರ ಗಾಯವಾದ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಪಾಂಡವಪುರ ಉಪವಿಭಾಗೀಯ ಆಸ್ಪತ್ರೆ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಶವವನ್ನು ಒಪ್ಪಿಸಲಾಯಿತು.
ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.