ಹೆಣ್ಣು ಭ್ರೂಣ ಹತ್ಯೆ: ಮತ್ತಿಬ್ಬರು ಆರೋಪಿಗಳ ಸೆರೆ
*8ಕ್ಕೆ ಏರಿದ ಬಂಧಿತರ ಸಂಖ್ಯೆ
ಮೊಗದಷ್ಟು ಸಿಗುತ್ತಿರುವ ಆರೋಪಿಗಳು
ಪಾಂಡವಪುರ : ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ಪಾಂಡವಪುರ ಪೊಲೀಸರು ಬಂಧಿಸಿದ್ದು, ಈವರೆಗೆ ಬಂಧಿತರ 8ಕ್ಕೆ ಏರಿದಂತಾಗಿದೆ.
ತಾಲೂಕಿನ ಮಹದೇಶ್ವರಪುರ ಗ್ರಾಮದ ಕಿರಣ್ ಹಾಗೂ ಹೊಸಕೋಟೆ ಗ್ರಾಮದ ಎಚ್.ಪಿ.ಅಖಿಲಾಶ್ ಹೆಣ್ಣು ಭ್ರೂಣಹತ್ಯೆ ಪ್ರಕರಣದಲ್ಲಿ ಭಾಗಿಯಾಗಿ ಬಂಧಿತರಾಗಿರುವ ಆರೋಪಿಗಳು.
ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಂಡವಪುರ ಪೊಲೀಸ್ ಇನ್ಸ್‌ಪೆಕ್ಟರ್ ಕುಮಾರ್, ಸಬ್‌ಇನ್ಸ್‌ಪೆಕ್ಟರ್ ಉಮೇಶ್ ಇದುವರೆಗೂ ಒಟ್ಟು ಎಂಟು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಹದೇಶ್ವರಪುರ ಗ್ರಾಮದ ಕಿರಣ್ ಹಾಗೂ ಹೊಸಕೋಟೆ ಗ್ರಾಮದ ಅಖಿಲಾಶ್ ಇಬ್ಬರೂ ಗರ್ಭಪಾತ ಮಾಡಿಸಿಕೊಳ್ಳುವ ಗರ್ಭಿಣಿರಿಗೆ ಸ್ಕ್ಯಾನಿಂಗ್ ಸೆಂಟರ್ ಹಾಗೂ ಇನ್ನಿತರ ಸ್ಥಳಕ್ಕೆ ಗೌಪ್ಯವಾಗಿ ಕರೆದೊಯ್ಯುವ ಕೆಲಸ ಮಾಡುತ್ತಿದ್ದರು.
ಪೊಲೀಸರಿಂದ ತನಿಖೆ ಚುರುಕು : ಹೆಣ್ಣು ಭ್ರೂಣ ಹತ್ಯೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಪ್ರಕರಣದಲ್ಲಿ ದೊಡ್ಡ ಜಾಲವೇ ಅಡಗಿದೆ ಎನ್ನಲಾಗಿದ್ದು, ಮತ್ತಷ್ಟು ಆರೋಪಿಗಳನ್ನು ಪೊಲೀಸರು ಬಂಧಿಸುವ ಸಾಧ್ಯತೆ ಇದೆ.