ಮಂಡ್ಯ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ
ವಿದ್ಯಾರ್ಥಿಯೊಬ್ಬ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮದ್ದೂರು ತಾಲೂಕು ಕೊಪ್ಪ ಹೋಬಳಿಯ ತಗ್ಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹದೇವು ಅವರ ಪುತ್ರ ಲಿಖಿತ್ (15) ಮೃತ ಯುವಕ. ಗುರುವಾರ ಎಸ್ಸೆಸ್ಸೆಲ್ಸಿ ಫಲಿತಾಂಶ ನೋಡಲು ಶಾಲೆಯ ಬಳಿ ಹೋದಾಗ ಶಿಕ್ಷಕರು ಎರಡು ವಿಷಯದ ಅನುತ್ತೀರ್ಣಗೊಂಡಿದ್ದಿಯಾ ಎಂದು ತಿಳಿಸಿದ್ದಾರೆ. ಈ ವೇಳೆ ತುಂಬಾ ಬೇಸರಗೊಂಡಿದ್ದ ನಿಖಿಲ್ ನನ್ನು ಶಿಕ್ಷಕರು ಸಮಾಧಾನ ಮಾಡಿ ಮನೆಗೆ ಕಳುಹಿಸಿದ್ದಾರೆ. ಆದರೂ ಬೇಸರಗೊಂಡು ಜಮೀನಿನ ಬಳಿ ಹೋಗಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನ ಸಾವಿನಿಂದಾಗಿ ಕುಟುಂಬದವರ ರೋಧನ ಮುಗಿಲು ಮುಟ್ಟಿತ್ತು.