Thursday, July 10, 2025
spot_img

ನಕಲಿ ಪ್ರಮಾಣಪತ್ರ ನೀಡಿದ ವೈದ್ಯಾಧಿಕಾರಿ ಅಮಾನತ್ತು

ಬೆಂಗಳೂರು: ನಕಲಿ ವೈದ್ಯಕೀಯ ಪ್ರಮಾಣಪತ್ರ ವಿತರಣೆ

ಹಾಗೂ ಭ್ರಷ್ಟಾಚಾರದ ಆರೋಪದ ಮೇಲೆ ವಿಕ್ಟೋರಿಯಾ ಆಸ್ಪತ್ರೆಯ ತುರ್ತುಚಿಕಿತ್ಸಾ ವೈದ್ಯಾಧಿಕಾರಿ ಡಾ. ಶಂಕರ್ ಕೆ.ಎನ್‌. ಅವರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತು ಮಾಡಿದೆ.
ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.

ಡಾ. ಶಂಕರ್ ಕೆ.ಎನ್. ಅವರು ನಕಲಿ ವೈದ್ಯಕೀಯ ಪ್ರಮಾಣಪತ್ರ ನೀಡುತ್ತಿರುವುದು ಹಾಗೂ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಖಾಸಗಿ ಸುದ್ದಿವಾಹಿನಿಯೊಂದು ಪ್ರಸಾರ ಮಾಡಿದೆ. ಈ ಪ್ರಕರಣದಲ್ಲಿ ದೊರಕಿದ ದಾಖಲೆಗಳು ಹಾಗೂ ಘಟನೆಯನ್ನು ಪರಿಶೀಲಿಸಿದಾಗ ಮೆಲ್ನೋಟಕ್ಕೆ ಆರೋಪ ಎಸಗಿದಂತೆ ಕಂಡುಬಂದಿದೆ’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

‘ತಕ್ಷಣ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಅವರನ್ನು ಅಮಾನತಿನಲ್ಲಿ ಇರಿಸಲಾಗುವುದು’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!