ಚಿಕ್ಕಮಗಳೂರು: ನಗರಸಭೆ ಲೆಕ್ಕಾಧಿಕಾರಿ ಲತಾಮಣಿ ಅವರ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಜಯನಗರದಲ್ಲಿನ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪತಿ ಚಂದ್ರಶೇಖರ್ ಅವರು ನಿರ್ಮಿತಿ ಕೇಂದ್ರದ ಎಂಜಿನಿಯರ್ ಆಗಿದ್ದು, ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿರುವ ಆರೋಪದಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.