Friday, September 25, 2026
spot_img

ನಾಗಮಂಗಲ:ಕೋಮು ಗಲಭೆಗೆ ಪ್ರಚೋದನೆ ಆರೋಪ:ಆರ್ ಎಸ್ ಎಸ್ ಕಾರ್ಯಕರ್ತನ ಮೇಲೆ ಸುಮೋಟೊ ಪ್ರಕರಣ ದಾಖಲು

ನಾಗಮಂಗಲ ಗಣೇಶ ವಿಸರ್ಜನೆ: ಪ್ರಚೋದನಾಕಾರಿ ಭಾಷಣದ ಆರೋಪ – ಆರ್‌ಎಸ್‌ಎಸ್ ಮುಖಂಡನ ವಿರುದ್ಧ ಎಫ್‌ಐಆರ್ ದಾಖಲು

ನಾಗಮಂಗಲ: ಸೆಪ್ಟೆಂಬರ್ 21 ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ಪ್ರಚೋದನಾಕಾರಿ ಭಾಷಣ ಮಾಡಿ, ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಆರ್‌ಎಸ್‌ಎಸ್ (RSS) ಸಂಘಟನೆಯ ಶ್ರೀನಿವಾಸ್ ಎಂಬುವವರ ವಿರುದ್ಧ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ (Suo Moto) ಎಫ್‌ಐಆರ್ ದಾಖಲಾಗಿದೆ.

ಘಟನೆಯ ವಿವರ:

ಸೆಪ್ಟೆಂಬರ್ 21 ರಂದು ನಾಗಮಂಗಲದಲ್ಲಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಯು ವಿಜೃಂಭಣೆಯಿಂದ ಸಾಗುತ್ತಿತ್ತು. ಮಧ್ಯಾಹ್ನ ಸುಮಾರು 03:30 ಗಂಟೆಗೆ ಮಂಡ್ಯ ವೃತ್ತದ ಬಳಿ ಧ್ವನಿವರ್ಧಕದ ಮೂಲಕ ಮಾತನಾಡಿದ ಆರೋಪಿ ಶ್ರೀನಿವಾಸ್, ಸಾರ್ವಜನಿಕರನ್ನು ಉದ್ರೇಕಿಸುವ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಮಾತುಗಳನ್ನು ಆಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಕ್ಷಣವೇ ಎಚ್ಚೆತ್ತ ಬಂದೋಬಸ್ತ್ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಮಧ್ಯಪ್ರವೇಶಿಸಿ ಭಾಷಣವನ್ನು ನಿಲ್ಲಿಸುವಂತೆ ಸೂಚನೆ ನೀಡಿ, ಮೆರವಣಿಗೆಯನ್ನು ಶಾಂತಿಯುತವಾಗಿ ಮುಂದುವರಿಸಿದರು.

ಐತಿಹಾಸಿಕ ಹಿನ್ನೆಲೆಯ ಮುನ್ನೆಚ್ಚರಿಕೆ:

2024ನೇ ಸಾಲಿನಲ್ಲಿ ನಾಗಮಂಗಲದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ನಡೆದಿದ್ದ ಕೋಮುಗಲಭೆ, ಅಂಗಡಿಗಳಿಗೆ ಬೆಂಕಿ ಹಚ್ಚಿದಟನೆ ಹಾಗೂ ಕಲ್ಲುತೂರಾಟದ ಕಹಿ ಘಟನೆಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಹಾಗೂ ಸಾರ್ವಜನಿಕ ಶಾಂತಿ ಕದಡದಂತೆ ತಡೆಯಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ.

ಪ್ರಸ್ತುತ ಈ ಪ್ರಕರಣದ ಕುರಿತು ತನಿಖೆ ಮುಂದುವರಿದಿದ್ದು, ನಾಗಮಂಗಲದ ಸಿಜೆ (ಹಿರಿಯ ಶ್ರೇಣಿ) ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!