ಎಪ್ರಿಲ್ 01ರಂದು ಮಂಡ್ಯ ಕೈ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
ಮಂಡ್ಯ: ಮಾ೨೯.ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ರವರು ಎಪ್ರಿಲ್ ೦೧ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಪ್ರಕಟಿಸಿದರು.
ನಗರದ ಪತ್ರಿಕಾಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅಂದು ಬೆಳಿಗ್ಗೆ ಮಂಡ್ಯ ಗ್ರಾಮ ದೇವತೆ ಕಾಳಮ್ಮನ ಗುಡಿಯಲ್ಲಿ ಪೂಜೆ ಸಲ್ಲಿಸಿ ಮಧ್ಯಾಹ್ನ ಒಂದು ಗಂಟೆಯೊಳಗೆ ನಾಮಪತ್ರ ಸಲ್ಲಿಸಲಾಗುವುದು.ಈ ಸಂಧರ್ಭದಲ್ಲಿ ಕಾಂಗ್ರೆಸ್ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ.ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದು ಒಂದು ಲಕ್ಷಕ್ಕು ಹೆಚ್ಚಿನ ಮಂದಿ ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.ಗೋಷ್ಠಿಯಲ್ಲಿ ಶಾಸಕ ಗಣಿಗ ರವಿಕುಮಾರ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಧರ್ ಚಿದಂಬರ್ ವಿಜಯಲಕ್ಷ್ಮೀ ರಘುನಂದನ್ ಉಪಸ್ಥಿತರಿದ್ದರು