*ಎಲೆಕ್ಟ್ರನಿಕ್ ಮಾಧ್ಯಮದಲ್ಲಿ ಪ್ರಸಾರವಾಗುವ ರಾಜಕೀಯ ಜಾಹೀರಾತುಗಳಿಗೆ ಪೂರ್ವಾನುಮತಿ ಕಡ್ಡಾಯ: ಡಾ: ಕುಮಾರ*
ಎಲೆಕ್ಟ್ರನಿಕ್ ಮಾಧ್ಯಮದಲ್ಲಿ ಪ್ರಸಾರವಾಗುವ ರಾಜಕೀಯ ಜಾಹೀರಾತುಗಳಿಗೆ ಪೂರ್ವಾನುಮತಿ ಕಡ್ಡಾಯವಾಗಿದ್ದು, ಟಿವಿ, ಕೇಬಲ್ ವಾಹಿನಿ, ಸಾಮಾಜಿಕ ಮಧ್ಯಮದಲ್ಲಿ ಪ್ರಸಾರವಾಗುವ ಸುದ್ದಿ ಹಾಗೂ ಜಾಹೀರಾತುಗಳ ಮೇಲೆ ತೀವ್ರ ನಿಗಾ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿತವಾಗಿರುವ ಮಾಧ್ಯಮ ಮೇಲ್ವಿಚರಣಾ ಕೋಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಪೋಸ್ಟ್ ಗಳಲ್ಲಿ ಚುನಾವಣಾ ಆಯೋಗ ನಿರ್ದೇಶನ ನೀಡಿರುವ ಮಾದರಿ ನೀತಿ ಸಂಹಿತೆ ಪಾಲನೆ ಕಡ್ಡಾಯವಾಗಿರುತ್ತದೆ ಎಂದರು.
ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲುಸ್ತುವಾರಿ ಸಮಿತಿಯಲ್ಲಿ ಪಾವತಿ ಸುದ್ದಿಯ ಬಗ್ಗೆಯು ಸಹ ತಂಡ ನಿಗಾ ವಹಿಸುತ್ತಿದೆ. ಸಮಿತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಿಯೋಜಿತ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ತಿಳಿಸಿದರು.
ದೂರು ನಿರ್ವಹಣಾ ಕೋಶ: ದೂರು ನಿರ್ವಹಣಾ ಕೋಶಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ದೂರು ನಿರ್ವಹಣಾ ಕೋಶದಲ್ಲಿ ಸ್ವೀಕೃತವಾಗುವ ದೂರುಗಳು ಸಂಬಂಧಿಸಿದ ವಿಭಾಗಕ್ಕೆ ಸಲ್ಲಿಸಿ ಕೈಗೊಂಡ ಕ್ರಮಗಳ ಬಗ್ಗೆ ವರದಿಯಾಗಬೇಕು ಎಂದರು.
ಎಸ್.ಎಸ್.ಟಿ ತಂಡಗಳ ವಾಹನಗಳಿಗೆ ಜಿ.ಪಿ.ಎಸ್ ಅಳವಡಿಸಲಾಗಿದ್ದು, ಅವುಗಳ ಚಲನ- ವಲನಗಳು ಹಾಗೂ ಚೆಕ್ ಪೋಸ್ಟ್ ಗಳಲ್ಲಿ ಅಳವಡಿಸಿರುವ ಸಿ.ಸಿ. ಕ್ಯಾಮರ ಗಳ ಕಾರ್ಯನಿರ್ವಹಣೆ ಸಹ ದೂರು ನಿರ್ವಹಣಾ ಕೋಶದಲ್ಲಿ ಪರಿಶೀಲಿಸಲಾಗುತ್ತಿದ್ದು, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು, ಚುನಾವಣಾ ತಹಶೀಲ್ದಾರ್ ವೆಂಕಟಚಲಪತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ನಿರ್ಮಲ ಎಸ್. ಹೆಚ್. ಮಿಡಿಯಾ ಮಾನಿಟರಿಂಗ್ ಸೆಲ್ ನ ನೋಡಲ್ ಅಧಿಕಾರಿ ಸಿದ್ದರಾಜು,ಡಾ; ಮನೋಹರ್ ಹಾಗೂ ಡಾ: ಶಿವರಾಜು ಉಪಸ್ಥಿತರಿದ್ದರು.