Thursday, September 19, 2024
spot_img

ಕೆರಗೋಡು ಗಲಾಟೆಯಲ್ಲಿ ಭಾಗೀಯಾದವರ ವಿರುದ್ದ ರೌಡಿಷೀಟ್ ತೆರೆಯುವುದಕ್ಕೆ ವಿರೋಧ

ಮಂಡ್ಯ :- ಕೆರಗೋಡು ಹನುಮ ಧ್ವಜ ಹೋರಾಟದಲ್ಲಿ ಭಾಗಿಯಾಗಿದ್ದ ಹನುಮ ಭಕ್ತರ ಮೇಲೆ ರಾಜಕೀಯ ಪ್ರಭಾವಕ್ಕೊಳಗಾಗಿ ನಿರಂತರ ದೌರ್ಜನ್ಯ, ದಬ್ಬಾಳಿಕೆ ಮಾಡುತ್ತಿರುವ ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡುವಂತೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕೆರಗೋಡು ಗ್ರಾಮದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

Img 20240511 Wa0161

ಗ್ರಾಮದ ಬಸ್ ನಿಲ್ದಾಣ ಸಮೀಪದ ವೃತದಿಂದ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಮೆರವಣಿಗೆ ಹೊರಟು ಜೈ ಶ್ರೀ ರಾಮ್ ಘೋಷಣೆ ಕೂಗುತ್ತಾ ಪೊಲೀಸ್ ಠಾಣೆವರೆಗೆ ತೆರಳಿ ಪೊಲೀಸರು ಜಾರಿ ಮಾಡಿದ್ದ ನೋಟಿಸ್ ಗೆ ಉತ್ತರ ನೀಡಿದರು.
ಕೆರಗೋಡು ಗ್ರಾಮದಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಹನುಮ ಧ್ವಜಸ್ತಂಬದಲ್ಲಿ ಹನುಮ ಧ್ವಜ ಹಾರಾಟ ಮಾಡಲಾಗಿತ್ತು, ಇದಕ್ಕೆ ಜಿಲ್ಲಾಡಳಿತ ರಾಷ್ಟ್ರಧ್ವಜ ಹಾರಿಸಲು ಅನುಮತಿ ಪಡೆದು ಹನುಮ ಧ್ವಜ ಹಾರಿಸಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದಾಗ ಹನುಮ ಧ್ವಜ ಉಳಿವಿಗಾಗಿ ಸಾವಿರಾರು ಹನುಮ ಭಕ್ತರು ಹೋರಾಟ ಮಾಡಿದ್ದರು, ರಾಜ್ಯ ಸರ್ಕಾರ ಹಾಗೂ ಸಚಿವ,ಶಾಸಕರ ಒತ್ತಡಕ್ಕೆ ಮಣಿದು ಹನುಮ ಧ್ವಜ ತೆರವು ಮಾಡಿ ರಾಷ್ಟ್ರಧ್ವಜ ಹಾರಿಸಿದ್ದರು ಅಂದು ಹೋದ ಅಧಿಕಾರಿಗಳು ಇಂದಿಗೂ ಸಹ ಇತ್ತ ತಲೆ ಹಾಕದೆ ರಾಷ್ಟ್ರಧ್ವಜವನ್ನು ಸಹ ಹಾರಿಸದೆ ಅಗೌರವ ತೋರುತ್ತಿದ್ದಾರೆ.
ಹನುಮಧ್ವಜ ಹೋರಾಟದಲ್ಲಿ ಭಾಗಿಯಾಗಿದ್ದವರ ಮೇಲೆ ಶಾಸಕರು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ, ರಾಜಕೀಯ ಒತ್ತಡಕ್ಕೆ ಒಳಗಾಗಿರುವ ಪೊಲೀಸರು ಅಮಾಯಕರ ಮೇಲೆ ದೌರ್ಜನ್ಯ,ದಬ್ಬಾಳಿಕೆ ಮಾಡುತ್ತಿದ್ದಾರೆ, ಜೈ ಶ್ರೀ ರಾಮ್ ಘೋಷಣೆ ಕೂಗಿದವರನ್ನು ಠಾಣೆಗೆ ಕರೆಸಿ ಬೆದರಿಕೆ ಹಾಕಲಾಗುತ್ತಿದೆ ಅಷ್ಟೇ ಅಲ್ಲದೆ ಹನುಮ ಧ್ವಜ ಹೋರಾಟದಲ್ಲಿ ಭಾಗಿಯಾಗಿದ್ದ ಬಾಲಕೃಷ್ಣ, ಶಿವು, ಕಾರ್ತಿಕ್ ಹಾಗೂ ಹರೀಶ್ ಗೆ ನಿಮ್ಮನ್ನು ಏಕೆ ರೌಡಿ ಶೀಟರ್ ಪಟ್ಟಿಗೆ ಸೇರಿಸಬಾರದು ಎಂದು ನೋಟಿಸ್ ಜಾರಿ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೌಡಿಶೀಟರ್ ಪಟ್ಟಿಗೆ ಸೇರ್ಪಡೆ ಮಾಡಲು ಅದಕ್ಕೆ ಆದ ನಿಯಮಾವಳಿಗಳಿವೆ ಆದರೆ ಅದನ್ನೆಲ್ಲ ಗಾಳಿಗೆ ತೂರಿ ಯಾವುದೇ ಕ್ರಿಮಿನಲ್ ಅಪರಾಧ ಇಲ್ಲದಿದ್ದರೂ ಹನುಮ ಧ್ವಜ ಹೋರಾಟದಲ್ಲಿ ಬಾಗಿಯಾಗಿದ್ದಾರೆ ಎಂಬ ಏಕೈಕ ಕಾರಣಕ್ಕೆ ರೌಡಿಶೀಟರ್ ಪಟ್ಟಿಗೆ ಸೇರಿಸಲು ಪೋಲಿಸ್ ಅಧಿಕಾರಿಗಳು ಮುಂದಾಗಿದ್ದಾರೆ, ಕೆರಗೋಡು ಠಾಣೆಯ ಸಬ್ ಇನ್ ಸ್ಪೆಕ್ಟರ್, ಸರ್ಕಲ್ ಇನ್ ಸ್ಪೆಕ್ಟರ್ ಹಾಗೂ ಡಿವೈಎಸ್ ಪಿ ವಿನಾಕಾರಣ ಕಿರುಕುಳ ನೀಡುತ್ತಿದ್ದು, ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಗುರಿ ಮಾಡಲಾಗಿದೆ ಎಂದು ಕಿಡಿಕಾರಿದರು.
ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಒತ್ತಡದಿಂದ ಯುವಕರನ್ನು ಹೆದರಿಸಿ,ಬೆದರಿಸುವ ಕೆಲಸಕ್ಕೆ ಪೊಲೀಸರು ಮುಂದಾಗಿದ್ದು, ಹನುಮಧ್ವಜ ವಿಚಾರದಲ್ಲಿ ಜಿಲ್ಲಾಡಳಿತ ನಮ್ಮಗಳ ವಿರುದ್ಧ ನಿಂತಾಗ ಕಾನೂನಾತ್ಮಕ ಹೋರಾಟದಿಂದ ನ್ಯಾಯ ಪಡೆಯಲು ಮುಂದಾಗಿದ್ದು, ಆದರೆ ಪೊಲೀಸರು ಕೆರಗೋಡು ಮತ್ತು ಸುತ್ತಮುತ್ತಲ ಗ್ರಾಮದ ಯುವಜನರಲ್ಲಿ ಬೀತಿ ವಾತಾವರಣ ಸೃಷ್ಟಿಸುತ್ತಿದೆ, ಈ ಕೂಡಲೇ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು.
ಪೊಲೀಸರ ನೋಟಿಸ್ ಗೆ ಉತ್ತರ ನೀಡುತ್ತೇವೆ, ಪೊಲೀಸರು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಅಮಾಯಕ ಯುವಕರನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಲು ಮುಂದಾದರೆ ಕಾನೂನು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಜೆಡಿಎಸ್ ಮುಖಂಡ ಬಿ ಆರ್ ರಾಮಚಂದ್ರ, ರಘು ನಂದನ್, ವಸಂತಕುಮಾರ್, ಯೋಗೇಶ್, ನರಸಿಂಹಮೂರ್ತಿ, ವಿರೂಪಾಕ್ಷ, ಬಾಲು ಚಿಕ್ಕ ಬಳ್ಳಿ, ಶ್ರೀನಿವಾಸ್ ನೇತೃತ್ವ ವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!