ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಸಕಲ ಸಿದ್ಧತೆ: ಡಾ: ಕುಮಾರ*
ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು.
ಭಾರತ ಚುನಾವಣಾ ಆಯೋಗವು 18ನೇ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ನೆನ್ನೆಯಿಂದಲೇ ಜಿಲ್ಲೆಯ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆಯು ಜಾರಿಯಲ್ಲಿದೆ. ಮಂಡ್ಯ ಜಿಲ್ಲೆಯು ಸಾಮಾನ್ಯ ಕ್ಷೇತ್ರವಾಗಿದ್ದು, ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳಾದ ಮಳವಳ್ಳಿ, ಮದ್ದೂರು, ಮಂಡ್ಯ, ಮೇಲುಕೋಟೆ, ನಾಗಮಂಗಲ, ಕೆ ಆರ್ ಪೇಟೆ, ಶ್ರೀರಂಗಪಟ್ಟಣ , ಕೆ ಆರ್ ನಗರ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯೊಳಗೆ ಬರುತ್ತವೆ ಎಂದು ತಿಳಿಸಿದರು.
ಭಾರತೀಯ ಚುನಾವಣಾ ಆಯೋಗ ಹೊರಡಿಸಿರುವ ಆದೇಶದ ಪ್ರಕಾರ ಮಾರ್ಚ್ 28 ರಂದು ಅಧಿಸೂಚನೆಯನ್ನು ಪ್ರಕಟಿಸಲಾಗುವುದು. ಮಾರ್ಚ್ 28 ರಿಂದ ಏಪ್ರಿಲ್ 04 ರವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಏಪ್ರಿಲ್ 05 ರಂದು ನಾಮಪತ್ರಗಳ ಪರಿಶೀಲಿಲನೆ ನಡೆಯಲಿದ್ದು, ಏಪ್ರಿಲ್ 08 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿರುತ್ತದೆ. ತೆಗೆದುಕೊಳ್ಳುವುದಕ್ಕೆ ಅವಕಾಶ ನೀಡಲಾಗಿದೆ. ಏಪ್ರಿಲ್ 26 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಜೂನ್ 04 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದರು.
ಅಪರ ಜಿಲ್ಲಾಧಿಕಾರಿಗಳನ್ನೊಳಗೊಡಂತೆ 8 ವಿಧಾನಸಭಾ ಕ್ಷೇತ್ರಗಳಿಗೆ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು