Tuesday, October 15, 2024
spot_img

ಮಂಡ್ಯ:ಏಳು ಅಭ್ಯರ್ಥಿಗಳಿಂದ 09 ನಾಮಪತ್ರ ಸಲ್ಲಿಕೆ

ಮಂಡ್ಯ :- ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯ ನಾಮಪತ್ರ ಸಲ್ಲಿಕೆ ಬಿರುಸು ಪಡೆದಿದ್ದು, ಸೋಮವಾರ ಏಳು ಅಭ್ಯರ್ಥಿಗಳು 9 ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡ ಮೂರನೇ ದಿನದಲ್ಲಿ ವಿವಿಧ ರಾಜಕೀಯ ಪಕ್ಷಗಳು ಮತ್ತು ಪಕ್ಷೇತರರಾಗಿ ಸ್ಪರ್ಧೆ ಬಯಸಿ 7 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಹೆಚ್. ನಾರಾಯಣ , ಕರುನಾಡು ಪಾರ್ಟಿ ಅಭ್ಯರ್ಥಿಯಾಗಿ ಬೂದಯ್ಯಾ
ಪಕ್ಷೇತರ ಅಭ್ಯರ್ಥಿಯಾಗಿ ಚನ್ನಮಾಯಿಗೌಡ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಲೋಕೇಶ್. ಎಸ್ , ಪಕ್ಷೇತರ ಅಭ್ಯರ್ಥಿಯಾಗಿ ಚಿಕ್ಕನಂಜಾಚಾರಿ , ಶಂಭುಲಿಂಗೇಗೌಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಅದೇ ರೀತಿ, ಭಾರತೀಯ ರಾಷ್ಟೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ 3 ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ.
ಆರಂಭದಿಂದ ಇಲ್ಲಿಯವರೆಗೆ ಒಟ್ಟು 10 ಅಭ್ಯರ್ಥಿಗಳಿಂದ 12 ನಾಮಪತ್ರ ಸಲ್ಲಿಕೆಯಾಗಿರುತ್ತದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!