ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತ ಪತ್ರಗಳ ಎಣಿಕೆಯಲ್ಲಿ ಎನ್ ಡಿಎ ಅಭ್ಯರ್ಥಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ.
ನಗರದ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನೊಂದಿಗೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯುತ್ತಿದೆ. ಅಂಚೆ ಮತಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ವಿರುದ್ಧ ಎನ್ ಡಿಎ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) 108ಮತಗಳ ಅಂತರದೊಂದಿಗೆ ಮುನ್ನಡೆ ಸಾಧಿಸಿದ್ದಾರೆ.
ಜಿಲ್ಲಾಧಿಕಾರಿ ಡಾ.ಕುಮಾರ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿ.ಪಂ ಸಿಇಒ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂನ ಬೀಗ ತೆಗೆದು ವಿದ್ಯುನ್ಮಾನ ಮತಯಂತ್ರಗಳನ್ನು ಮತ ಎಣಿಕೆ ಕೊಠಡಿಗಳಿಗೆ ತರಲಾಯಿತು. ಅಲ್ಲಿ ಮೊದಲಿಗೆ ಅಂಚೆ ಮತಗಳನ್ನು ಎಣಿಕೆ ಮಾಡಲಾಯಿತು. ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 108ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಶೀಘ್ರದಲ್ಲೇ ಇವಿಎಂ ಮತಗಳ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ.