Sunday, July 14, 2024
spot_img

ಮಂಡ್ಯ:ನಾಲ್ಕನೆ ಸುತ್ತಿನಲ್ಲು ಕುಮಾರಸ್ವಾಮಿ ಮುನ್ನೆಡೆ

ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ಮುಂದುವರೆದಿದ್ದು ಎನ್ ಡಿಎ ಅಭ್ಯರ್ಥಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು 69,458ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ನಗರದ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದೆ. 4ಸುತ್ತಿನ ಮತ ಎಣಿಕೆಯಲ್ಲಿ ಎನ್ ಡಿಎ ಅಭ್ಯರ್ಥಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ವಿರುದ್ಧ 69,458 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

4ನೇ ಸುತ್ತಿನ ಮತ ಎಣಿಕೆಯಲ್ಲಿ ಎನ್ ಡಿಎ ಅಭ್ಯರ್ಥಿ ಎಚ್.ಡಿ.
ಕುಮಾರಸ್ವಾಮಿ ಅವರಿಗೆ 1,70,508 ಮತಗಳು ಹಾಗೂ ಸ್ಟಾರ್ ಚಂದ್ರು ಅವರಿಗೆ 1,01052ಮತಗಳು ಲಭಿಸಿದೆ.

ಜೆಡಿಎಸ್, ಬಿಜೆಪಿ ಕಾರ್ಯಕರ್ತರ ಸಂಭ್ರಮ: ಕುಮಾರಸ್ವಾಮಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ವಿರುದ್ಧ ಭಾರಿ ಅಂತರ ಕಾಯ್ದುಕೊಂಡಿರುವ ಹಿನ್ನೆಲೆಯಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಸಂಭ್ರಮ ಆಚರಿಸುತ್ತಿದ್ದಾರೆ.

ಮತ ಎಣಿಕೆ ಕೇಂದ್ರದ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಗೊಂಡಿರುವ ಜೆಡಿಎಸ್-ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!