Wednesday, October 23, 2024
spot_img

ಮಂಡ್ಯ:ಪೇಟ್ರೋಲ್.ಡಿಸೇಲ್ ಸೆಸ್‌ ಏರಿಕೆ ವಿರುದ್ದ ಬಿಜೆಪಿ ಪ್ರತಿಭಟನೆ

ಮಂಡ್ಯ : ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಸೆಸ್ ಏರಿಕೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪಕ್ಷದ ವತಿಯಿಂದ ನಗರದ ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ನೇತೃತ್ವದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು, ಬೈಕ್ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ರೀತಿ . ಹಾಗೂ ಮರಕ್ಕೆ ನೇಣು ಹಾಕೊಳ್ಳುತ್ತಿರುವ ರೀತಿ ಅಣಕು ಪ್ರದರ್ಶಿಸಿ ವಿನೂತನ ಪ್ರತಿಭಟನೆ ನಡೆಸಿ ಗಮನಸೆಳೆದರು.

ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರದ
ಘೋಷಣೆಗಳನ್ನು ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪೆಟ್ರೋಲ್, ಡಿಸೇಲ್ ಸೆಸ್ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಘೋಷಣೆ ಕೂಗಿ ಆಕ್ರೋಶವನ್ನು ಹೊರಹಾಕಿದರು.

ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ, ಸಂಜಯ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು, ಕೂಡಲೇ ಪೆಟ್ರೋಲ್, ಡೀಸೇಲ್ ಮೇಲಿನ ಸೆಸ್ ದರವನ್ನು ಇಳಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಮುಖಂಡರಾದ
ವಿದ್ಯಾ ನಾಗೇಂದ್ರ, ರೂಪಾ, ಮಳವಳ್ಳಿ ಅಶೋಕ್, ರಾ.ಶಿ.ಸಿದ್ದರಾಜು, ವಿವೇಕ್, ಬಿಜೆಪಿ ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಕನ್ನಂಬಾಡಿ ಸುರೇಶ್ ಇತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!