Wednesday, October 23, 2024
spot_img

ಮಂಡ್ಯ:ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಮಂಡ್ಯ :ಮೇ.೨೩. ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಈ ಕೂಡಲೇ ಪತ್ತೆ ಹಚ್ಚಿ ಬಂಧಿಸುವಂತೆ ಒತ್ತಾಯಿಸಿ ಮಹಿಳಾ ಕೃಷಿ ಕೂಲಿಕಾರರ ಉಪಸಮಿತಿ ಮತ್ತು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಮಂಡ್ಯ ಜಿಲ್ಲಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಮೆರವಣಿಗೆ ಹೊರಟು ಅಲ್ಲಿ ಕೆಲ ಕಾಲ ಧರಣಿ ನಡೆಸಿದ ಪ್ರತಿಭಟನಾಕಾರರು,
ಜಿಲ್ಲಾಧಿಕಾರಿ ಡಾ
ಕುಮಾರ ಅವರ ಮೂಲಕ ಪ್ರಧಾನ ಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಹಾಸನದ ಪ್ರಜ್ವಲ್ ರೇವಣ್ಣ ನಡೆಸಿರುವ ವಿಕೃತ ಲೈಂಗಿಕ ಸಮೂಹ ಅತ್ಯಾಚಾರ ಹಗರಣವು ಬಹುದೊಡ್ಡ ಲೈಂಗಿಕ ಹತ್ಯಾಕಾಂಡವಾಗಿದ್ದು ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ. ಲೈಂಗಿಕ ಕ್ರಿಯೆಗಳನ್ನು ನಡೆಸಿರುವ ಸುಮಾರು 2900 ವೀಡಿಯೋಗಳನ್ನು ಮತ್ತು ಪೋಟೋಗಳನ್ನು ಸೆರೆ ಹಿಡಿದಿಟ್ಟುಕೊಂಡಿರುವುದಂತೂ ಅತ್ಯಂತ ಖಂಡನೀಯ. ಸಂತ್ರಸ್ತರು ದೂರು ನೀಡದಂತೆ ಬೆದರಿಸುವುದು, ಅಪಹರಿಸುವುದು ಅನೇಕ ವರ್ಷಗಳಿಂದ ಮುಚ್ಚಿಟ್ಟಿರುವುದು ಘನ ಘೋರ ಅಪರಾಧವಾಗಿದೆ. ಇಂತಹ ದುಸ್ಸಾಹಸವನ್ನು ಪ್ರೋತ್ಸಾಹಿಸಿರುವ ಹೆಚ್ ಡಿ ರೇವಣ್ಣ ಸಹ ಅಷ್ಟೇ ಅಪರಾಧಿಯಾಗಿದ್ದಾರೆ ಎಂದು ಆರೋಪಿಸಿದರು.

ಜಗತ್ತಿನಲ್ಲಿ ಹಿಂದೆಂದೂ ಕೇಳರಿಯದಂತಹ ಈ ಹಗರಣವನ್ನು ರಾಜಕೀಯ ಪಕ್ಷಗಳು ಮತ್ತು ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗೆ ಬಳಸಿರುವುದು ಮತ್ತಷ್ಟು ಆಘಾತಕಾರಿ ಬೆಳವಣಿಗೆಯಾಗಿದೆ. ಈ ಕೃತ್ಯದ ಬಗ್ಗೆ ತಿಳಿದೂ ಇವರಿಗೆ ಲೋಕಸಭೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿರುವ ಪ್ರಧಾನಿ ನರೇಂದ್ರಮೋದಿಯ ಬಿಜೆಪಿ ನೀತಿ ರಾಜಕೀಯ ದಿವಾಳಿಯಾಗಿದೆ ಎಂದು ಕಿಡಿಕಾರಿದರು.

ಪ್ರಜ್ವಲ್ ರೇವಣ್ಣನನ್ನು ಪತ್ತೆ ಮಾಡಿ ತಕ್ಷಣ ಬಂಧಿಸಬೇಕು. ಐಟಿ, ಐಪಿಸಿ ಹಾಗೂ ಯುಎಪಿಎ ಕಾಯಿದೆಯಡಿ ಪ್ರಕರಣ ದಾಖಲಿಸಿ ಮೊಕದ್ದಮೆ ಹೂಡಬೇಕು. ಸಂತಸ್ಥ ಮಹಿಳೆಯರನ್ನು ರಕ್ಷಿಸಬೇಕು ಮತ್ತು ಅವರ ಕುಟುಂಬದವರಿಗೆ ಕಿರುಕುಳ, ಪ್ರಾಣಭಯ, ತೊಂದರೆ ನೀಡುವವರಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎಸ್ ಐಟಿ ತನಿಖೆ ಕಾಯಿದೆಯ ಅನುಸಾರ ಕಾಲ ಮಿತಿಯೊಳಗೆ ನಡೆಯಬೇಕು. ಆ ಕಾಲಮಿತಿಯ ತನಿಖೆಯನ್ನು ಪ್ರಕಟಿಸಬೇಕು. ಜತೆಗೆ ದೇಶ ಬಿಟ್ಟು ಪರಾರಿಯಾಗಲು ಅವಕಾಶ ಕಲ್ಪಿಸಿರುವ ಕೇಂದ್ರ ಗೃಹ ಇಲಾಖೆ ಮತ್ತು ಇಂಟಲಿಜೆನ್ಸ್ ವಿಭಾಗದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಇದರ ಹೊಣೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಹೊರಬೇಕು. ದೇಶದ ಜನರಲ್ಲಿ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು

ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಎಂ.ಪುಟ್ಟಮಾಧು, ಮಳವಳ್ಳಿ ತಾಲೂಕು ಕಾರ್ಯದರ್ಶಿ ಸರೋಜಮ್ಮ, ಮಂಡ್ಯ ತಾಲೂಕು ಕಾರ್ಯದರ್ಶಿ ಆರ್. ರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಹನುಮೇಶ್, ಪಾಂಡವಪುರ ತಾಲೂಕು ಅಧ್ಯಕ್ಷ ಎನ್.ಸುರೇಂದ್ರ, ತಾಲೂಕು ಅಧ್ಯಕ್ಷ ಬಿ.ಎಂ.ಶಿವಮಲ್ಲಯ್ಯ, ಮಂಡ್ಯ ತಾಲೂಕು ಅಧ್ಯಕ್ಷ ಅಮಾಸಯ್ಯ, ಮಂಡ್ಯ ತಾಲೂಕು ಉಪಾಧ್ಯಕ್ಷ ಅಬ್ದುಲ್ಲಾ, ಮುಖಂಡರಾದ ತಳಗವಾದಿ ರಾಮಣ್ಣ,
ಕಪನಿಗೌಡ ಸುಜ್ಜಲೂರು, ಮಲ್ಲೇಶ ಸುಜ್ಜಲೂರು,
ನಾಗಮ್ಮ ಸಿ.ಎ.ಕೆರೆ ಇತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!