ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ಮುಂದುವರೆದಿದ್ದು ಎನ್ ಡಿಎ ಅಭ್ಯರ್ಥಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು 1,14714ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ನಗರದ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದೆ. 6ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಎನ್ ಡಿಎ ಅಭ್ಯರ್ಥಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ವಿರುದ್ಧ 1,14714ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
6ನೇ ಸುತ್ತಿನ ಮತ ಎಣಿಕೆಯಲ್ಲಿ ಎನ್ ಡಿಎ ಅಭ್ಯರ್ಥಿ ಎಚ್.ಡಿ.
ಕುಮಾರಸ್ವಾಮಿ ಅವರಿಗೆ 2,78,798 ಮತಗಳು ಹಾಗೂ ಸ್ಟಾರ್ ಚಂದ್ರು ಅವರಿಗೆ 1,64084ಮತಗಳು ಲಭಿಸಿದೆ.
ಜೆಡಿಎಸ್, ಬಿಜೆಪಿ ಕಾರ್ಯಕರ್ತರ ಸಂಭ್ರಮ: ಕುಮಾರಸ್ವಾಮಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ವಿರುದ್ಧ ಭಾರಿ ಅಂತರ ಕಾಯ್ದುಕೊಂಡಿರುವ ಹಿನ್ನೆಲೆಯಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಸಂಭ್ರಮ ಆಚರಣೆ ಮಾಡುತ್ತಿದ್ದಾರೆ.
ಮತ ಎಣಿಕೆ ಕೇಂದ್ರದ ಆವರಣದಲ್ಲಿ ಜಮಾವಣೆಗೊಂಡಿರುವ ಜೆಡಿಎಸ್-ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಬಿಜೆಪಿ ಹಾಗೂ ಜೆಡಿಎಸ್ ಬಾವುಟ ಹಿಡಿದು ಎರಡು ಪಕ್ಷಗಳ ಕಾರ್ಯಕರ್ತರು ಸಂಭ್ರಮದಲ್ಲಿ ತೊಡಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ವಿರುದ್ದ ಭಾರಿ ಮುನ್ನಡೆ ಕಾಯ್ದುಕೊಂಡಿರುವ ಹಿನ್ನೆಲೆಯಲ್ಲಿ
ಕುಮಾರಸ್ವಾಮಿ ಮಂಡ್ಯ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.