ಮಂಡ್ಯ : ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೆ ನೇರ ಹೊಣೆಗಾರರಾಗಿದ್ದು ಕೂಡಲೇ ಅವರು ಮುಖ್ಯಮಂ ತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಮುಖಂಡರಾದ ಅಶೋಕ್ ಜೈರಾಮ್ ಹಾಗೂ ಡಾಕ್ಟರ್ ಸಿದ್ದರಾಮಯ್ಯ ಒತ್ತಾಯಿಸಿದರು.
ಜಂಟಿ ಸುದ್ದಿಗೋಷ್ಠಿ ನಡೆಸಿ
ಮಾತನಾಡಿದ ಬಿಜೆಪಿ ಮುಖಂಡ ಡಾ.ಸಿದ್ದರಾಮಯ್ಯ ಅವರು,ಮೈಸೂರಿನ ಮುಡಾ ಹಗರಣ ದೊಡ್ಡ ಹಗರಣವಾಗಿದೆ. ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿಯೂ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆಸಲಾಗಿದೆ .ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣರಾಗಿದ್ದು,ಇವರ ಜೊತೆಗೆ ಮಾಜಿ ಸಚಿವ ನಾಗೇಂದ್ರ ಅವರು ಸಹ ಸೇರಿದ್ದು ಹಗರಣದ ಹಣವನ್ನು ತೆಲಂಗಾಣ ಚುನಾವಣೆಗೆ ಬಳಕೆ ಮಾಡಲಾಗಿದೆ ಎಂದು ದೂರಿದರು .
ಮೈಸೂರು ಮೂಡದಲ್ಲಿ ಸಾವಿರಾರು ಕೋಟಿ ರೂಪಾಯಿ ಹಗರಣ ನಡೆದಿದ್ದು ಹಾಗಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು .
ಮೂಡ ಆಯುಕ್ತರು ಈ ಪ್ರಕರಣದಲ್ಲಿ ಭಾಗಿಯಾಗಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು .ಕಾನೂನು ಬಾಹಿರವಾಗಿ ನಿವೇಶನ ಹಂಚಿರುವ ಬಗ್ಗೆ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ದ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪತ್ನಿಗೆ 3.16 ಗುಂಟೆ ಜಮೀನನ್ನು ಅವರ ತಮ್ಮ ನೀಡಿದ್ದಾರೆ ಎಂದು ತಿಳಿಸಿದ್ದಾರೆ .ಆದರೆ ಮುಖ್ಯಮಂತ್ರಿಗಳು 50 * 50 ಅನುಪಾತದಲ್ಲಿ ನಿವೇಶನ ಪಡೆದುಕೊಳ್ಳಲು ತಾವೇ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಹೊಸ ನಿಯಮದ ಪ್ರಕಾರ ನಿವೇಶನ ನೀಡಿ ಎಂದು ಆದೇಶ ಮಾಡಿದ್ದಾರೆ ಎಂದು ತಿಳಿಸಿದರು. 2020ರಲ್ಲಿ ಮೂಢದಿಂದ ನಿವೇಶನ ಹಂಚಿಕೆ ಮಾಡಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ನಿವೇಶನ ಹಂಚಿಕೆ ಮಾಡಲಾಗಿದೆ. ಇದು ಸರ್ಕಾರದ ಪ್ರಸ್ತಾವನೆಗೆ ಬಂದಿಲ್ಲ ಎಂದು ತಿಳಿಸಿದರು ನಿವೇಶನ ಹಂಚಿಕೆಯಲ್ಲಿ ಬಿಡಿ ನಿವೇಶನ ಹಂಚಿಕೆ ಮಾಡಿರುವುದು ಕಾನೂನುಬಾಹಿರವಾಗಿದೆ. ಕಾಯಿದೆ ಪ್ರಕಾರ ನಿವೇಶನಗಳನ್ನು ಹರಾಜು ಮಾಡಬೇಕಿದೆ .ಆದರೆ ನಿಯಮಗಳನ್ನು ಗಾಳಿಗೆ ತೂರಿ ನಿವೇಶನ ಹಂಚಲಾಗಿದೆ ಎಂದು ದೂರಿದರು.
ಅಶೋಕ್ ಜೈರಾಮ್ ಅವರು ಮಾತನಾಡಿ ,ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಹಂಚಿಕೆಯಲ್ಲಿ ದೊಡ್ಡ ಅವ್ಯವಹಾರ ನಡೆದಿದೆ .ಸಾವಿರಾರು ಕೋಟಿ ರೂಪಾಯಿ ಹಗರಣ ನಡೆದಿದೆ .ಆದ್ದರಿಂದ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಶುಕ್ರವಾರ ಮೈಸೂರಿನಲ್ಲಿ ಮೂಢ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಾಂತರ ರೂಪಾಯಿ ಹಗರಣವನ್ನು ಖಂಡಿಸಿ ಪ್ರತಿಭಟನೆ ನಡೆಯಲಿದ್ದು ಮಂಡ್ಯದಿಂದ 700 ಕಾರುಗಳಲ್ಲಿ ಮೈಸೂರಿಗೆ ತೆರಳಲು ಸಿದ್ಧತೆ ನಡೆಸಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಪ್ರತಿಭಟನೆಗೆ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ನಾಳೆ ತೆರಳಿದ್ದರು ಅವರು ಮಂಡ್ಯಕ್ಕೆ ಆಗಮಿಸಿದ ಸಂದರ್ಭದಲ್ಲಿ ಭವ್ಯವಾಗಿ ಸ್ವಾಗತಿಸುವುದು ಎಂದರು.
ಗೋಷ್ಠಿಯಲ್ಲಿ ಸಿ.ಟಿ.ಮಂಜುನಾಥ್.ನಾಗಾನಂದ,ವಸಂತಕುಮಾರ್ ಉಪಸ್ಥಿತರಿದ್ದರು.