ಮಂಡ್ಯ:ಮೇ ೨೦. ಮಂಡ್ಲ್ಯ ರಾಯಲ್ ಚೆಸ್ ಅಕಾಡೆಮಿಯ ಆರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ ಎಂದು ಅಕಾಡೆಮಿಯ ತರಬೇತುದಾರ ಎಂ.ಎಸ್ .ಚೇತನ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 14ರಂದು ಮಂಡ್ಯದ ಗಾಂಧಿ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿ ಈ ಆರು ಮಂದಿ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಉಳಿದವರು ಕೂಡ ಬಹುಮಾನ ಗಳಿಸಿದ್ದಾರೆ ಎಂದರು .
19 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಆಶಿತ್ ರಂಜನ್ ಗೌಡ, 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಎಸ್ ಸುಮುಕ್, 13 ವರ್ಷದೊಳಗಿನ ವಿಭಾಗದಲ್ಲಿ ಎಂ ಹೆಚ್ ಯದ್ವಿತಿ, 11 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಸಿ ಚಿರಾಗ್, 9 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ನಿಹಾರಿಕ, 7ನೇ ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಹೇಮಂತ್ ಆಯ್ಕೆಯಾಗಿದ್ದು ಇತರ ವಿದ್ಯಾರ್ಥಿಗಳು ಸಹ ಬಹುಮಾನಗಳನ್ನು ಗಳಿಸಿದ್ದಾರೆ ಎಂದರು.
ಗೋಷ್ಠಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.