ಬೆಂಗಳೂರು:ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅನಾರೋಗ್ಯ ಹಿನ್ನಲೆಯಲ್ಲಿ ಆಸ್ಪತ್ರೆ ಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಪ್ರಕಟವಾದ ಹಿನ್ನೆಲೆಯಲ್ಲಿ ಟ್ವೀಟ್ ಖಾತೆ ಮೂಲಕ ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.
ನಾನು ವಾಡಿಕೆಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದೇನೆ. ಆತಾಂಕ ಅಥವ ಭಯಪಡುವ ಅವಶ್ಯಕತೆ ಇಲ್ಲ. ಕೆಲವೇ ದಿನಗಳಲ್ಲಿ ಮನೆಗೆ ವಾಪಸ್ಸಾಗುತ್ತೇನೆ ಎಂದು ದೇವೇಗೌಡ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ್ದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ, ಅಲ್ಲದೆ, ನನಗೆ ದೇವೇಗೌಡ ಅವರ ಆರೋಗ್ಯವೇ ಮುಖ್ಯ. ಈ ವಿಚಾರವಾಗಿ ಅವರಿಗೆ ಹೆಚ್ಚಿನ ಹೊರೆ ನೀಡುವುದು ಇಷ್ಟವಿಲ್ಲ. ದೇವೇಗೌಡರ ಆರೋಗ್ಯ ಸ್ಥಿತಿ ಹೇಗಿದೆ ಅಂತ ನನಗೆ ಮಾತ್ರ ಗೊತ್ತು. ಬೇರೆ ಯಾರಿಗೂ ಗೊತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದರು.