Sunday, June 7, 2026
spot_img

ಯುವಕನ ಕೊಲೆ ಆರೋಪ:ಆರೋಪಿಗಳ ಬಂಧನಕ್ಕೆ ಆಗ್ರಹ

ಕೋಣಸಾಲೆ ಗ್ರಾಮದ ಯುವಕ ಅಭಿಷೇಕ್ ಸಾವಿನ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಮದ್ದೂರು ತಾಲ್ಲೂಕಿನ ಕೊಪ್ಪ ಹೋಬಳಿಯ ಕೋಣಸಾಲೆ ಗ್ರಾಮದ ಪರಿಶಿಷ್ಟ ಜಾತಿಯ ಅಲೆಮಾರಿ ಕೊರಮ ಜನಾಂಗಕ್ಕೆ ಸೇರಿದ ಯುವಕ ಅಭಿಷೇಕ್ ಬಿನ್ ಕೃಷ್ಣಪ್ಪ  ಸಾವಿನ ಪ್ರಕರಣವನ್ನು ಖಂಡಿಸಿ, ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಇಂದು ಬೆಸಗರಹಳ್ಳಿ ಪೊಲೀಸ್ ಠಾಣೆ ಮುಂಭಾಗ ಮಂಡ್ಯ ಜಿಲ್ಲಾ ಕುಳುವ ಸಮಾಜ, ಬೆಂಗಳೂರು ದಕ್ಷಿಣ ಜಿಲ್ಲಾ ಕೊರಮ ಸೇವಾ ಸಂಘ (ರಿ) ಹಾಗೂ AKMS ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು, ಅದೇ ಗ್ರಾಮದ ಸವರ್ಣೀಯ ಸಮುದಾಯಕ್ಕೆ ಸೇರಿದ ತಿಮ್ಮ ಎಂಬಾತನು ಮೃತ ಅಭಿಷೇಕ್ ಅವರಿಗೆ ₹40 ಸಾವಿರ ಸಾಲ ನೀಡಿದ್ದು, ಎಳನೀರು ಕುಯ್ಯುವ ಕೆಲಸಕ್ಕೆ ಬಾರದ ಕಾರಣ ಕೋಪಗೊಂಡು ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ್ದಾನೆ. ನಂತರ ಮನೆಗೆ ನುಗ್ಗಿ ಹಲ್ಲೆ ನಡೆಸಿ ಕೊಲೆ ಮಾಡಿ, ಆತ್ಮಹತ್ಯೆಯಂತೆ ಬಿಂಬಿಸುವ ಉದ್ದೇಶದಿಂದ ನೇಣು ಹಾಕಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಘಟನೆಯ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ಸತ್ಯಾಂಶವನ್ನು ಬಹಿರಂಗಪಡಿಸಿ ಮೃತ ಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸಂಬಂಧ ಮದ್ದೂರು ವೃತ್ತ ನಿರೀಕ್ಷಕರಿಗೆ ಮನವಿ ಪತ್ರ ಸಲ್ಲಿಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಇತರೆ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ AKMS ರಾಜ್ಯ ಸಂಘಟನಾ ಕಾರ್ಯದರ್ಶಿ ವೆಂಕಟೇಶ್ (ರಾಮನಗರ), ರಾಜ್ಯ ಮುಖಂಡರು ಹಾಗೂ ವಕೀಲರಾದ ಕಿರಣ್ ಕುಮಾರ್ ಕೊತ್ತಗೆರೆ, ವಕೀಲರಾದ ಪುಟ್ಟರಾಜು (ಮದ್ದೂರು), ನಟೇಶ್ (ಬೆಂಗಳೂರು), ಪತ್ರಕರ್ತ ಕೃಷ್ಣಮೂರ್ತಿ (ಲಕ್ಷೀಪುರ, ಚೆನ್ನಪಟ್ಟಣ), ಮಂಡ್ಯ ಜಿಲ್ಲಾ ಕುಳುವ ಸಮಾಜದ ಮುಖಂಡರಾದ ಟೆಂಪೋ ರಾಮಕೃಷ್ಣ, ರಾಮಶೆಟ್ಟಿ (ಹನಕೆರೆ), ಮದ್ದೂರು ತಾಲ್ಲೂಕು ಮುಖಂಡರಾದ ನಾರಾಯಣಸ್ವಾಮಿ, ಮಹೇಶ್ (ನಗರಕೆರೆ), ಅಬ್ಬೂರು ದೊಡ್ಡಿ ವೆಂಕಟೇಶ್, ಕೊಪ್ಪ ರವಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಪ್ರಕರಣದ ಸತ್ಯಾಸತ್ಯತೆ ಹೊರಬಂದು ಆರೋಪಿಗಳಿಗೆ ಶಿಕ್ಷೆಯಾಗುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಮುಖಂಡರು ಎಚ್ಚರಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!