Tuesday, February 18, 2025
spot_img

ಆರೋಗ್ಯ ಇಲಾಖೆಯ ನೌಕರರಿಗೆ ಚಾಟಿ ಬೀಸಿದ ಆಯುಕ್ತರು! ಇನ್ನಾದರೂ ಎಚ್ಚೆತ್ತುಕೊಳ್ಳುವರೆ ಅಧಿಕಾರಿಗಳು?

ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಸಮಯ ಪಾಲನೆ ಮಾಡುವುದರ ಜೊತೆಗೆ ಇಲಾಖೆಯ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆಯಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಸರ್ಕಾರಿ ನೌಕರರು ಚಲನ-ವಲನ ವಹಿಯನ್ನು ನಿರ್ವಹಿಸದಿರುವುದು, ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿಯನ್ನು ಧರಿಸದಿರುವುದು, ಅಧಿಕಾರಿ/ಸಿಬ್ಬಂದಿಗಳ ಹೆಸರು ಮತ್ತು ಹುದ್ದೆಯ ನಾಮಫಲಕಗಳನ್ನು ಅಳವಡಿಸದಿರುವ ಬಗ್ಗೆ ದೂರುಗಳು ಸ್ವೀಕೃತವಾಗಿರುವುದರಿಂದ  ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಕೆಳಕಂಡ ಸೂಚನೆಗಳನ್ನು ಪಾಲಿಸಲು ಸೂಚಿಸಲಾಗಿದೆ.

1. ನಿಯಮಗಳ ಪ್ರಕಾರ ಕಛೇರಿಗೆ ಬರುವ ವೇಳೆ ಹಾಗೂ ಕಛೇರಿಯಿಂದ ಹೊರಡುವ ವೇಳೆಯನ್ನು ಪಾಲನೆ ಮಾಡುವುದು.
2. ಕಛೇರಿ ಅವಧಿ ಪೂರ್ಣವಾಗುವವರೆಗೆ ತಮಗೆ ನಿಗದಿಪಡಿಸಿದ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸತಕ್ಕದ್ದು.
3. ಕಛೇರಿ ಸಮಯದಲ್ಲಿ ನೌಕರರು/ಅಧಿಕಾರಿಗಳು ಕಛೇರಿ ಕೆಲಸದ ನಿಮಿತ್ರ ತೆರಳಬೇಕಾಗಿದ್ದಲ್ಲಿ ಚಲನ-ವಲನ ವಹಿಯಲ್ಲಿ ಸಕಾರಣವನ್ನು ಪೂರ್ವಾನುಮತಿಯನ್ನು ಪಡೆಯತಕ್ಕದ್ದು. ನಮೂದಿಸಿ ಮೇಲಾಧಿಕಾರಿಗಳ
4. ಕರ್ತವ್ಯದ ಅವಧಿಯಲ್ಲಿ ಅಧಿಕಾರಿಗಳು/ಸಿಬ್ಬಂದಿಗಳು ಕಡ್ಡಾಯವಾಗಿ ಇಲಾಖೆಯಿಂದ ಪಡೆದ ಗುರುತಿನ ಚೀಟಿಯನ್ನು ಕೊರಳಿಗೆ ಧರಿಸುವುದು.
5. ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ/ ಅಧಿಕಾರಿಗಳು ತಾವು ಕುಳಿತು ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ಅಧಿಕಾರಿ/ ಸಿಬ್ಬಂದಿಗಳು ಹೆಸರು ಮತ್ತು ಹುದ್ದೆ ಸೂಚಿಸುವ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳತಕ್ಕದ್ದು.
6. ಹಿರಿಯ ನಾಗರಿಕರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದು.
7. ಯಾವುದೇ ರೀತಿಯ ಪತ್ರಗಳು ಬಂದಾಗ ಕಛೇರಿ ಕೈಪಿಡಿಯನ್ನಯ ಕಾರ್ಯ ನಿರ್ವಹಿಸುವುದು.
8. ಕಡತಗಳ ಚಲನವಲನಗಳ ಬಗ್ಗೆ, ನಿಗಾವಹಿಸುವುದು.
9. ಇ-ಆಫೀಸ್ ಲಭ್ಯವಿರುವ ಕಡೆ ಕಡತ/ಸ್ವೀಕೃತಿಪತ್ರ ಪರಿಶೀಲಿಸಿ ತುರ್ತಾಗಿ ನಿಯಮಗಳನ್ನಯ ವಿಲೇವಾರಿ ಮಾಡುವುದು.
10. ಈ ಮೇಲಿನ ನಿಯಮಗಳನ್ನು ಪಾಲಿಸದಿದ್ದಲ್ಲಿ CCA ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!