Wednesday, October 30, 2024
spot_img

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಖಚಿತಪಡಿಸಿದ ಕುಮಾರಸ್ವಾಮಿ

ಬೆಂಗಳೂರು: ಲೋಕಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈಗಾಗಲೇ ಬಿಜೆಪಿ ಹಾಗೂ ಕಾಂಗ್ರೆಸ್​ ತನ್ನ ಹುರಿಯಾಳುಗಳ ಹೆಸರುಗಳನ್ನು ಪ್ರಕಟಿಸಿದೆ. ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಘೋಷಿಸಿರುವ ಜೆಡಿಎಸ್​ ತನಗೆ ನೀಡಲಾಗಿರುವ ಮಂಡ್ಯ, ಕೋಲಾರ ಹಾಗೂ ಹಾಸನ ಲೋಕಸಭೆ ಕ್ಷೇತ್ರಗಳಿಗೆ ಈವರೆಗೆ ಅಭ್ಯರ್ಥಿ ಘೋಷಿಸಿಲ್ಲ.
ಹಾಸನ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಾಲಿ ಸಂಸದ ಪ್ರಜ್ವಲ್​ ರೇವಣ್ಣಗೆ ಟಿಕೆಟ್​ ಖಾತ್ರಿಯಾಗಿದ್ದು, ಕೋಲಾರ ಹಾಗೂ ಮಂಡ್ಯ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ದಳಪತಿಗಳಿಗೆ ಕಗ್ಗಂಟಾಗಿ ಉಳಿದಿದೆ. ಈ ಮೊದಲು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಮಂಡ್ಯದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕಿಳಿಯುತ್ತಾರೆ ಎಂದು ಹೇಳಲಾಗಿದೆ.
ಈಗಾಗಲೇ ಸ್ಥಳೀಯ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿರುವ ಮಾಜಿ ಸಿಎಂ ಎಚ್​ಡಿಕೆ ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ. ನಿಖಿಲ್​ ಅಥವಾ ಕುಮಾರಸ್ವಾಮಿ ಇಬ್ಬರಲ್ಲೊಬ್ಬರು ಸ್ಪರ್ಧಿಸಿದರೆ ಮಂಡ್ಯದಲ್ಲಿ ಜೆಡಿಎಸ್​ ಗೆಲುವು ಖಚಿತ ಎನ್ನುವ ವಾತಾವರಣ ನಿರ್ಮಾಣವಾಗಿದ್ದು, ಕುಮಾರಸ್ವಾಮಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

ಒಂದು ವೇಳೆ ಮಂಡ್ಯದಿಂದ ಕುಮಾರಸ್ವಾಮಿ ಗೆದ್ದರೆ ತೆರವಾಗುವ ಚೆನ್ನಪಟ್ಟಣ ಕ್ಷೇತ್ರವನ್ನು ತಮ್ಮ ಮಗ ನಿಖಿಲ್​ಗೆ ಬಿಟ್ಟುಕೊಡಲು ಕುಮಾರಸ್ವಾಮಿ ಯೋಜನೆ ರೂಪಿಸಿದ್ದಾರೆ. ಮತ್ತೊಂದೆಡೆ ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟು ಹೋಗದಂತೆ ಅಲ್ಲಿನ ಮುಖಂಡರು ಸಹ ಆಗ್ರಹಿಸುತ್ತಿದ್ದಾರೆ.ಮತ್ತೊಂದೆಡೆ ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟು ಹೋಗದಂತೆ ಅಲ್ಲಿನ ಮುಖಂಡರು ಸಹ ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ಅಂತಿಮವಾಗಿ ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸಿ ಎದ್ದಿರುವ ಊಹಾಪೋಹಗಳಿಗೆ ತೆರೆ ಎಳೆಯಲಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!