Thursday, February 5, 2026
spot_img

ಲಂಚಕ್ಕೆ ಬೇಡಿಕೆ ಇರಿಸಿದ್ದ ಮಂಡ್ಯ ಅಬಕಾರಿ ಉಪ ಆಯುಕ್ತ ನಾಗಶಯನ ಅಮಾನತ್ತು

ಲಂಚಕ್ಕೆ ಬೇಡಿಕೆ: ಮಂಡ್ಯ ಅಬಕಾರಿ ಉಪ ಆಯುಕ್ತ ನಾಗಶಯನ ಅಮಾನತು

​ಮಂಡ್ಯ (ಫೆ. 4): ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿದ್ದ ಭ್ರಷ್ಟಾಚಾರದ ಮತ್ತೊಂದು ಮುಖ ಬಯಲಾಗಿದ್ದು, ಲಂಚದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಬಕಾರಿ ಉಪ ಆಯುಕ್ತ (ಡಿಸಿ) ನಾಗಶಯನ ಅವರನ್ನು ಆಳಿಕೆ ಅಮಾನತುಗೊಳಿಸಿ ಆದೇಶಿಸಿದೆ.

ಕೆ.ಆರ್. ಪೇಟೆಯ ಸೋಮನಹಳ್ಳಿ ಗ್ರಾಮದಲ್ಲಿ ಹೊಸದಾಗಿ ಸಿಎಲ್-7 ಬಾರ್ ತೆರೆಯಲು ಸುಂದರ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಈ ಲೈಸೆನ್ಸ್ ನೀಡಲು ನಾಗಶಯನ 60 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿತ್ತು.

​ನ್ಯಾಯಾಲಯದ ಆದೇಶವಿದ್ದರೂ ಸಹ ಸಣ್ಣಪುಟ್ಟ ನೆಪಗಳನ್ನು ಹೇಳಿ ಪದೇ ಪದೇ ಅರ್ಜಿಯನ್ನು ವಜಾ ಮಾಡಲಾಗುತ್ತಿತ್ತು. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆಡಿಯೋ ಸಮೇತ ಸುಂದರ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಕಳೆದ ಒಂದು ವರ್ಷದಿಂದ ಸುಂದರ್ ನಡೆಸುತ್ತಿದ್ದ ನಿರಂತರ ಹೋರಾಟ ಮತ್ತು ಈ ವಿಚಾರ ರಾಜ್ಯ ಸದನದಲ್ಲೂ ಚರ್ಚೆಯಾದ ಹಿನ್ನೆಲೆಯಲ್ಲಿ ಆಳಿಕೆ ಈ ಕಠಿಣ ಕ್ರಮ ಕೈಗೊಂಡಿದೆ. ​ಅಬಕಾರಿ ಇಲಾಖೆಯ ಈ ‘ಲಂಚಾವತಾರ’ ಈಗ ಜಿಲ್ಲಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!