Saturday, October 31, 2026
spot_img

ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರ ಖಂಡಿಸಿ ಕೆ ಆರ್ ಎಸ್ ನಿಂದ ಉಪವಾಸ ಸತ್ಯಾಗ್ರಹ

ಮಂಡ್ಯ ಜಿಲ್ಲೆಯಲ್ಲಿ ಭೂ ಅಕ್ರಮ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಆಗ್ರಹಿಸಿ ಕೆ ಆರ್ ಎಸ್ ಪಕ್ಷದಿಂದ ಉಪವಾಸ ಸತ್ಯಾಗ್ರಹ:

ಮಂಡ್ಯ: ಜಿಲ್ಲೆಯ ವಿವಿಧ ತಾಲೂಕು ಕಚೇರಿಗಳು ಹಾಗೂ ಗ್ರಾಮ ಆಡಳಿತ ಮಟ್ಟದಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ, ಭೂ ಅಕ್ರಮ, ಸರ್ಕಾರಿ ದಾಖಲೆಗಳ ದುರುಪಯೋಗ ಮತ್ತು ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಮಂಡ್ಯ ಜಿಲ್ಲಾ ಘಟಕ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಈ ಸಂಬಂಧ ಇಂದು ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟವಧಿ ಧರಣಿ ಆರಂಭಿಸಿ ಮಾತನಾಡಿದ ಪಕ್ಷದ ಮುಖಂಡರು, ನಾಗಮಂಗಲ ಮತ್ತು ಶ್ರೀರಂಗಪಟ್ಟಣ ತಾಲೂಕುಗಳಲ್ಲಿ ನಡೆದಿರುವ ಬಗರ್‌ಹುಕುಂ ಭೂ ಹಗರಣ, ‘ಮೋಜಣಿ’ ತಂತ್ರಾಂಶದ ಅನಧಿಕೃತ ಬಳಕೆ, ಕಡತಗಳ ನಾಶ ಹಾಗೂ ನಕಲಿ ಇ-ಖಾತಾ ದಂಧೆಗಳ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಸರ್ಕಾರಿ ಭೂಮಿಗೆ ಸಂಬಂಧಿಸಿದ ಅಕ್ರಮಗಳು ಮತ್ತು ತಂತ್ರಾಂಶದ ದುರುಪಯೋಗದ ಬಗ್ಗೆ ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು. ತಪ್ಪಿತಸ್ಥ ಅಧಿಕಾರಿಗಳು ಹಾಗೂ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮನವಿಯ ಪ್ರಮುಖ ಬೇಡಿಕೆಗಳು:

* ಬಗರ್‌ಹುಕುಂ ಭೂ ಹಗರಣ ಹಾಗೂ ಮೋಜಣಿ ತಂತ್ರಾಂಶದ ದುರುಪಯೋಗದ ಕುರಿತು ಎಸ್‌ಐಟಿ ತನಿಖೆ ನಡೆಸಬೇಕು.

* ಮ್ಯೂಟೇಷನ್, ಪಾತಿ ಖಾತಾ ಮತ್ತು ಹದ್ದುಬಸ್ತು ಅರ್ಜಿಗಳನ್ನು ನಿಗದಿತ ಕಾಲಮಿತಿಯಲ್ಲಿ ವಿಲೇವಾರಿ ಮಾಡಬೇಕು. ವಿಳಂಬ ಮಾಡುವ ಅಧಿಕಾರಿಗಳಿಗೆ ದಂಡ ವಿಧಿಸಬೇಕು.

* ತಾಲೂಕು ಕಚೇರಿಗಳ ದಾಖಲೆ ಕೊಠಡಿಗಳಿಗೆ (Record Rooms) ಸಿಸಿಟಿವಿ ಅಳವಡಿಸಿ, ಸರ್ಕಾರಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಬೇಕು.

* ತಾಲೂಕು ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ, ಸಾರ್ವಜನಿಕರ ಅರ್ಜಿಗಳ ವಿಲೇವಾರಿಯಲ್ಲಿ ಪಾರದರ್ಶಕತೆ ತರಬೇಕು.

* ವಿದ್ಯುತ್ ಸಂಪರ್ಕ ಸೇರಿದಂತೆ ವಿವಿಧ ಸೌಲಭ್ಯಗಳಿಂದ ವಂಚಿತರಾಗಿರುವ ಫಲಾನುಭವಿಗಳಿಗೆ ನ್ಯಾಯ ಒದಗಿಸಬೇಕು.

* ರೈತರ ಜೀವನೋಪಾಯಕ್ಕೆ ಸಂಬಂಧಿಸಿದ ಮನ್‌ಮುಲ್‌ನಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು.

* ನಾಗಮಂಗಲ ತಾಲೂಕಿನಲ್ಲಿ ಕದಡಿರುವ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸಿ, ಸಾರ್ವಜನಿಕರಿಗೆ ರಕ್ಷಣೆ ಒದಗಿಸಬೇಕು.

* ಬಗರ್‌ಹುಕುಂ ವ್ಯಾಜ್ಯಗಳಲ್ಲಿ ಭ್ರಷ್ಟಾಚಾರ ನಡೆಸಿರುವ ಅಧಿಕಾರಿಗಳು ಹಾಗೂ ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು.

* ರೈತರ ಕೃಷಿ ಭೂಮಿಗೆ ಸಂಬಂಧಿಸಿದಂತೆ ಉಲ್ಲೇಖಿಸಿರುವ 5,500 ರೂ. ಶುಲ್ಕದ ವಿಚಾರದಲ್ಲಿ ಸರ್ಕಾರದ ಫೋಷಣೆ ಹಾಗೂ ನಿಯಮಗಳನ್ನು ಜಾರಿಗೊಳಿಸಬೇಕು.

* ರೈತರ ಬಾಕಿ ಅರ್ಜಿಗಳನ್ನು ಆದ್ಯತೆಯ ಮೇರೆಗೆ ವಿಲೇವಾರಿ ಮಾಡಿ, ನ್ಯಾಯ ಒದಗಿಸಬೇಕು.

* ಅಕ್ರಮವಾಗಿ ಮಂಜೂರಾಗಿರುವ ಇ-ಖಾತಾಗಳನ್ನು ರದ್ದುಗೊಳಿಸಿ, ಕಾವೇರಿ ನದಿ ಪಾತ್ರದ ಬಫರ್ ವಲಯಗಳಲ್ಲಿನ ಅಕ್ರಮ ಒತ್ತುವರಿಗಳನ್ನು ತೆರವುಗೊಳಿಸಬೇಕು.

ಮಂಡ್ಯ ಜಿಲ್ಲೆಯ ರೈತರು ಮತ್ತು ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ಅನಗತ್ಯ ಅಲೆದಾಟಕ್ಕೆ ಒಳಗಾಗದೆ ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುವಂತಹ ಆಡಳಿತ ವ್ಯವಸ್ಥೆ ನಿರ್ಮಾಣವಾಗಬೇಕು. ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಮುಖಂಡರು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಧರಣಿಯಲ್ಲಿ ಪಕ್ಷದ ಮುಖಂಡರಾದ ರಾಜ್ಯ ಸಂಘಟನಾ ಕಾರ್ಯದರ್ಶಿ.ಮಂಡ್ಯ ಜಿಲ್ಲಾ ಉಸ್ತುವಾರಿ. ರಮೇಶ್ ಗೌಡ.ಜಿಲ್ಲಾಧ್ಯಕ್ಷ ಮಲ್ಲೇಶ್.
ಕಾರ್ಯದರ್ಶಿ ಯೋಗೆಶ್.ಚಂದ್ರು ಕೀಲಾರ.ರಾಜ್ಯ ಯುವಘಟಕದ ಕಾರ್ಯದರ್ಶಿ ಪ್ರಮೋದ್.
ದೀಪಿಕಾ.ತಾ ಅಧ್ಯಕ್ಷ ಜಯರಾಂ.ರಾಜವೆಂಕಟೇಶ್.ಯಲಿಯೂರು ಲೋಕೇಶ್.ಕರವೇ ಜಿಲ್ಲಾಧ್ಯಕ್ಷ ಎಚ್ ಡಿ ಜಯರಾಂ.ಅಮರ್ ಆಟೋ ಘಟಕದ ವೆಂಕಟೇಶ್ ‌.ಗೋವಿಂದರಾಜ್.ಕರುನಾಡ ಸೇವಕರು ಸಂಘಟನೆಯ ರಾಜ್ಯ ವಕ್ತಾರ ಎಂ.ಬಿ.ನಾಗಣ್ಣಗೌಡ. ರೈತಸಂಘದ ತಾ ಅಧ್ಯಕ್ಷ ಅಣ್ಣಯ್ಯ ಮೊದಲಾದವರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!