ಹಲಗೂರು: ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಬೆಳವಣಿಗೆಗೆ ಶ್ರಮಿಸುವ ಉದ್ದೇಶದಿಂದ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು, ಜಿಲ್ಲೆಯ ಸಾಹಿತ್ಯಿಕ ಮತ್ತು
ಚಟುವಟಿಕೆಗಳಿಗೆ ಹೊಸ ಆಯಾಮ ನೀಡುವ ಗುರಿ ಹೊಂದಿರು ವುದಾಗಿ ಸಮಾಜಸೇವಕ ಕೆ.ಟಿ. ಹನುಮಂತು ತಿಳಿಸಿದರು.
ಹಲಗೂರು, ಲಿಂಗಪಟ್ಟಣ, ಕೊನ್ನಾ ಪುರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು ಹಾಗೂ ಮತದಾರರನ್ನು ಭೇಟಿ ಮಾಡಿ ಬೆಂಬಲ ಕೋರಿ ಅವರು ಮಾತನಾಡಿದರು.
ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ವಿಶೇಷ ಸ್ಥಾನಮಾನವಿರುವ ಮಂಡ್ಯ ಜಿಲ್ಲೆಯಲ್ಲಿ ಸಾಹಿತ್ಯಿಕ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸುವ ಅಗತ್ಯವಿದೆ. ಹಿರಿಯ ಸಾಹಿತಿ ಗಳ ಮಾರ್ಗದರ್ಶನ ಹಾಗೂ ಕನ್ನಡಾಭಿ ಮಾನಿಗಳ ಸಹಕಾರದೊಂದಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಗಳನ್ನು ಜನಸಾಮಾನ್ಯರಿಗೆ ತಲುಪಿಸುವುದು ತಮ್ಮ ಉದ್ದೇಶವಾಗಿದೆ ಎಂದರು.
ಜಿಲ್ಲೆಯಾದ್ಯಂತ ಸಾಹಿತ್ಯ ಸಮ್ಮೇಳನಗಳು, ಕವಿಗೋಷ್ಠಿಗಳು, ವಿಚಾರ ಸಂಕಿರಣಗಳು ಹಾಗೂ ಕನ್ನಡಪರ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುವ ಮೂಲಕ ಯುವಜನರಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸಲು ಶ್ರಮಿಸುವುದಾಗಿ ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಂ ಪರೆಯ ಸಂರಕ್ಷಣೆ ಮತ್ತು ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಈ ಸಂಸ್ಥೆಯ ಮೂಲಕ ಜಿಲ್ಲೆಯ ಸಾಹಿತ್ಯಿಕ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವುದು ಹಾಗೂ ಕನ್ನಡಪರ ಚಟುವಟಿಕೆಗಳಿಗೆ ಉತ್ತೇಜನ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ಚುನಾವಣೆಯಲ್ಲಿ ಬೆಂಬಲಿಸಿ ಎಂದು ಕೋರಿದರು.
ಸಾಹಿತ್ಯ ಮತ್ತು ಸಮಾಜಸೇವೆಯನ್ನು ಉಸಿರಾಗಿಸಿಕೊಂಡು ಕನ್ನಡದ ಹಿತಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ತಮಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು, ಸಾಹಿತಿಗಳು, ಕನ್ನಡಾಭಿಮಾನಿ ಗಳು ಹಾಗೂ ಸಾರ್ವಜನಿಕರು ಬೆಂಬಲ ನೀಡುವ ಮೂಲಕ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಲು ಸಹಕರಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಕಾರ್ಯದರ್ಶಿ ಹುಸ್ಕೂರು ಕೃಷ್ಣೇಗೌಡ, ಲಕ್ಷ್ಮೀಶ, ಬೆನಮನ ಹಳ್ಳಿ ರವಿಗೌಡ, ಹುಲ್ಲಹಳ್ಳಿ ಪುಟ್ಟಬಸವೇ ಗೌಡ, ಲಿಂಗಪಟ್ಟಣ ಸುಂದರಪ್ಪ, ಡಿ.ಎಲ್. ಮಾದೇಗೌಡ, ಎ.ಎಸ್.ನಾಗೇಶ್, ಗುರು ಸಿದ್ದು, ಶಿವರಾಜು, ನಂದೀಪುರ ಕುಮಾರ್, ಶ್ರೀನಾಥ್ ಸೇರಿದಂತೆ ಹಲವರು ಇದ್ದರು.


