ಮದ್ದೂರು :- ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಂಚೇಗೌಡ -ಭಾನುಮತಿ ದಂಪತಿ ಪುತ್ರಿ ಅಮೃತ (15) ಫಲಿತಾಂಶ ಪ್ರಕಟಗೊಂಡ ಸ್ವಲ್ಪ ಹೊತ್ತಿನಲ್ಲಿಯೇ ನೇಣಿಗೆ ಶರಣಾಗಿದ್ದಾರೆ.
ಗುರುವಾರ ಮಧ್ಯಾಹ್ನದ ವೇಳೆ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರಕೆರೆ ಗ್ರಾಮದ ಪೂರ್ಣಿಮಾ ಪ್ರೌಡಶಾಲೆಯ ವಿಧ್ಯಾರ್ಥಿನಿ ಅಮೃತ ಎಸ್‌ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದರೂ ಸಹ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.