*ನವಜೀವನಕ್ಕೆ ಕಾಲಿಟ್ಟ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್*
ಕೆ.ಆರ್.ಪೇಟೆ: ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ನವಜೀವನಕ್ಕೆ ಕಾಲಿಟ್ಟಿದ್ದಾರೆ.ಕೆ.ಆರ್.ಪೇಟೆಯಲ್ಲಿ ಅವರ ನಿಶ್ಚಿತಾರ್ಥ ಸಮಾರಂಭ ಸರಳವಾಗಿ ನಡೆಯಿತು.
ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ಚನ್ನರಾಯಪಟ್ಟಣ ರಸ್ತೆಯಲ್ಲಿರುವ ರಾಯಲ್ ಕಂಫರ್ಟ್ ಹೋಟೆಲ್ ಸಭಾಂಗಣದಲ್ಲಿ ನಿಶ್ಚಿತಾರ್ಥ ಸಮಾರಂಭ ನಡೆಯಿತು. ಕೆ.ಆರ್.ಪೇಟೆಯ ಡಾ. ಶ್ರೀನಿಧಿ ಅವರೊಂದಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ನಿಶ್ಚಿತಾರ್ಥ ಮಾಡಿಕೊಂದಿದ್ದಾರೆ .
ಡಾ. ಶ್ರೀನಿಧಿ ಅವರು ಕೆ.ಆರ್.ಪೇಟೆ ಪಟ್ಟಣದ ಶಿಕ್ಷಕರ ಭವನದ ಪಕ್ಕದಲ್ಲಿರುವ ಬಿಜಿಎಸ್ ವಾಣಿಜ್ಯ ಸಂಕೀರ್ಣದಲ್ಲಿ ಸಂಜೀವಿನಿ ಕ್ಲಿನಿಕ್ ನಡೆಸುತ್ತಿರುವ ಡಾ. ಆರ್. ರಾಜೇಶ್ವರಿ ರವಿಕುಮಾರ್ ಅವರ ಸುಪುತ್ರಿ.ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿ, ಪ್ರೇಮಾಂಕುರವಾಗಿ ಎರಡೂ ಕುಟುಂಬಗಳ ಸಮ್ಮತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದೆ. ನವಜೀವನದ ಹೊಸ ಪಯಣಕ್ಕೆ ಕಾಲಿಡುತ್ತಿರುವ ನವಜೋಡಿಗೆ ಎರಡೂ ಕುಟುಂಬದವರು, ಸಂಬಂಧಿಕರು, ಹಿತೈಷಿಗಳು ಶುಭಕೋರಿದರು. ನವಜೋಡಿಯ ವಿವಾಹ ಜೀವನ ಸುಖಮಯವಾಗಿರಲಿ ಎಂದು ಹಾರೈಸಿದರು.
*ಸುದ್ದಿಯೊಂದಿಗೆ ಮನು ಮಾಕವಳ್ಳಿ, ಕೆ.ಆರ್.ಪೇಟೆ.*


