ಹೆಚ್.ಡಿ.ಕುಮಾರಸ್ವಾಮಿ ಪರ ಬಿಜೆಪಿ-ಜೆಡಿಎಸ್ ಪ್ರಚಾರ
ಏ.26 ರಂದು ನಡೆಯುವ ಮಂಡ್ಯ ಲೋಕಸಭಾ ಕ್ಷೇತ್ರದ ಎನ್.ಡಿ.ಎ.ಮೈತ್ರಿಕೂಟದ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರವರ ಪರವಾಗಿ ಮಂಡ್ಯ ವಿಧಾನಸಭಾ ಕ್ಷೇತ್ರದ ಕೆರಗೋಡು ಗ್ರಾಮದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಚುನಾವಣೆ ಪ್ರಚಾರ ನೆಡೆಸಿದರು. ಕೆರಗೋಡು ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದರು.
ಕೆರಗೋಡು, ಮಾರಗೌಡನಹಳ್ಳಿ, ವ್ಯವಸಾಯ ಕಾಲೋನಿ, ಶಿವಾರ, ಆಲಕೆರೆ, ಕೀಲಾರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಚುನಾವಣೆ ಪ್ರಚಾರ ನಡೆಸಿ ಮಾತನಾಡಿದ ಮಂಡ್ಯ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಮುಖಂಡರು ಕೆರಗೋಡಿನಲ್ಲಿ ಧ್ವಜ ಕೆಳಗಿಳಿಸುವ ವಿಚಾರದಲ್ಲಿ ಶಾಸಕ ರವಿಕುಮಾರ್ ಅವರು ದೊಡ್ಡತನ ಮೆರೆಯಲಿಲ್ಲ,ಶಾಂತಿಯುತವಾಗಿ ಸಭೆ ಮಾಡಿ ಧ್ವಜಾ ಕೆಳಗಿಳಿಸಬೇಕಿತ್ತು,ಅಧಿಕಾರಿಗಳು ಶಾಸಕರ ಕೈಗೊಂಬೆ ರೀತಿ ಕೆಲಸ ಮಾಡುತ್ತಿದ್ದಾರೆ ಈ ಹಿನ್ನೆಲೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟು ಪ್ರದರ್ಶಿಸಿ ಕೆಲಸ ಮಾಡಬೇಕು ಎಂದು ಹೇಳಿದರು.
ರೈತರ ಸ್ವಾಭಿಮಾನದ ಪ್ರಶ್ನೆ ಆಗಿರುವ ಕುಮಾರಣ್ಣ ಅವರನ್ನು ಗೆಲ್ಲಿಸಲು ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚಿಸುವ ಮೂಲಕ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತ ಕೊಟ್ಟು ಅವರನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸಬೇಕು ಎಂದು ಮನವಿ ಮಾಡಿದರು.
ನಿಖಿಲ್ ಸೋಲಿನಿಂದ ನೋವು ಅನುಭವಿಸಿರುವ ಕಾರ್ಯಕರ್ತರು ಈ ಚುನಾವಣೆ ದಿಕ್ಕೂಚಿಯಾಗಿದ್ದು ಮುನಿಸು ಮರೆತು ಒಗ್ಗಟ್ಟಾಗಿ ಲೋಕಸಭಾ ಚುನಾವಣೆ ಹಣ ಬಲವೋ,ಜನ ಬಲವೋ ಎಂಬುದನ್ನು ನಿರೂಪಿಸಬೇಕು ಎಂದರು.
ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಮಾತನಾಡಿ ಮಂಡ್ಯ ಜಿಲ್ಲೆಯ ನೀರಾವರಿ ಸಮಸ್ಯೆ ಬಗೆಹರಿಸಲು ಎನ್ ಡಿಎ ಅಭ್ಯರ್ಥಿ ಕುಮಾರಣ್ಣ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್,ಮನ್ ಮುಲ್ ಉಪಾಧ್ಯಕ್ಷ ಎಂ.ಎಸ್. ರಘುನಂದನ್, ಮೈಷುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ, ಜೆಡಿಎಸ್ ಮುಖಂಡರಾದ ಅಮರಾವತಿ ಚಂದ್ರಶೇಖರ್, ಕೆ.ಎಸ್.ವಿಜಯಾನಂದ, ವಸಂತರಾಜು,ಎಂ.ಜಿ.ತಿಮ್ಮೇಗೌಡ, ಬೂದನೂರು ಸ್ವಾಮಿ, ಪಾರ್ಥಸಾರಥಿ,ಬಿಜೆಪಿ ಮುಖಂಡರಾದ ಅಶೋಕ್ ಜಯರಾಮ್, ಭೀಮೇಶ್ ಸೇರಿದಂತೆ ಇತರರು ಹಾಜರಿದ್ದರು.