ಯಾವುದೇ ಆಮಿಷ, ಬೆದರಿಕೆ ಇಲ್ಲ:
ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕಡೆಯವರು ನನ್ನನ್ನು ಭೇಟಿ ಮಾಡಿದ್ದು ನಿಜ. ಆದರೆ, ಯಾವುದೇ ರೀತಿಯ ಬೆದರಿಕೆ ಹಾಗೂ ಆಮಿಷ ಒಡ್ಡಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಕಾಂಕ್ಷಿತರು ಜನಪ್ರತಿನಿಧಿಗಳನ್ನು ಭೇಟಿ ಮಾಡುವುದು ಸಹಜ. ಇದನ್ನೆ ತಪ್ಪಾಗಿ ಅರ್ಥೈಸಿಕೊಳ್ಳಬಾರದು. ಶಾಸಕ ರವಿಕುಮಾರ್ ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಮಂಡ್ಯ ಶಾಸಕ ರವಿಕುಮಾರ್ ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಿದ್ದರು. ಆ ವೇಳೆ ರಾಜ್ಯಸಭೆ ಚುನಾವಣೆ ಸಂಬAಧ ಆಕಾಂಕ್ಷಿತರು ಭೇಟಿ ಮಾಡಿದ್ದು ನಿಜ ಎಂದು ತಿಳಿಸಿದ್ದೆ. ಆದರೆ, ಅವರು ಈ ರೀತಿ ಏಕೆ ಹೇಳಿದ್ದಾರೆ ಗೊತ್ತಿಲ್ಲ. ರಾಜ್ಯಸಭೆ ಚುನಾವಣೆ ಆಕಾಂಕ್ಷಿಗಳು ಮೂವರನ್ನು ಭೇಟಿ ಮಾಡಿದ ಹಿನ್ನೆಲೆಯಲ್ಲಿ ಈ ರೀತಿ ಹೇಳಿರಬೇಕು ಎಂದು ಅವರು ಪ್ರತಿಕ್ರಿಯಿಸಿದರು.
ನನ್ನ ತಂದೆ ಪುಟ್ಟಣ್ಣಯ್ಯ ಹಾಗೂ ನನ್ನ ಗೆಲುವಿಗೆ ಕಾಂಗ್ರೆಸ್ ಪಕ್ಷ ಸಹಕಾರ ನೀಡಿದೆ. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುವುದು ನನ್ನ ಕರ್ತವ್ಯ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ರೈತಸಂಘದ ಪಾಂಡವಪುರ ತಾಲೂಕು ಅಧ್ಯಕ್ಷ ಚಂದ್ರಣ್ಣ, ಸರ್ವೋದಯ ಕರ್ನಾಟಕ ಪಕ್ಷದ ತಾಲೂಕು ಅಧ್ಯಕ್ಷ ದಯಾನಂದ್, ಉಪಾಧ್ಯಕ್ಷ ವಿಜಯ್‌ಕುಮಾರ್ ಹಾಗೂ ನಾಗರಾಜು ಗಾಣದಾಳು ಉಪಸ್ಥಿತರಿದ್ದರು.