ಬೈಕ್‌ಗೆ ಲಾರಿ ಡಿಕ್ಕಿ: ಯುವಕ ಸಾವು
ಮದ್ದೂರು: ಸೆ.೧೬.ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಿಕ್ಕೇರಿ ಬಳಿಯ ಗೊಲ್ಲರಕೊಪ್ಪಲು ಗ್ರಾಮದ ದೀಪಕ್ (22) ಎಂಬುವರು ಸಾವನ್ನಪ್ಪಿರುವ ಘಟನೆ ಪಟ್ಟಣದ ಎಳನೀರು ಮಾರುಕಟ್ಟೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ದೀಪಕ್ ಸೋಮನಹಳ್ಳಿಗೆ ಬಂದು ನಂತರ ತನ್ನ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಲಾರಿಯೊಂದು ಬೈಕ್ ಡಿಕ್ಕಿ ಹೊಡೆದಿದೆ. ಸವಾರನ ತಲೆಯ ಮೇಲೆ ಚಕ್ರ ಹರಿದ ಪರಿಣಾಮ ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪಟ್ಟಣದ ಸಂಚಾರ ಪೊಲೀಸರು ಲಾರಿಯನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ