Tuesday, October 13, 2026
spot_img

ಮನ್ ಮುಲ್ ಸೂಪರ್ ಸೀಡ್ ಗೆ ಕೆ ಆರ್ ಎಸ್ ಆಗ್ರಹ

*ಗೆಜ್ಜಲಗೆರೆ ಹಾಲಿನ ಡೈರಿ ಮನಮುಲ್ ಹಗರಣದ ಸಮಗ್ರ ತನಿಖೆಗೆ ಆಗ್ರಹಿಸಿ ಕೆ ಆರ್ ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ*

ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಗೆಜ್ಜಲಗೆರೆ ಹಾಲಿನ ಮಹಾ ಮಂಡಳಿ ಒಕ್ಕೂಟದಲ್ಲಿ (ಮನಮುಲ್) ನಡೆದಿರುವ ಹಾಲಿನ ಪುಡಿ ಕಲಬೆರಕೆ ಪ್ರಕರಣವನ್ನು ಖಂಡಿಸಿ, ಇಂದು ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ಮದ್ದೂರಿನಿಂದ ಬೈಕ್ ಜಾಥಾ ನಡೆಸಿ, ಗೆಜ್ಜಲಗೆರೆ ಹಾಲಿನ ಡೈರಿಯ ಮುಂಭಾಗದಲ್ಲಿ ಪ್ರತಿಭಟನೆಯನ್ನ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರವಿ ಕೃಷ್ಣಾರೆಡ್ಡಿ ಅವರು, ರೈತರು ತಮ್ಮ ಶ್ರಮ ಮತ್ತು ಸಹಕಾರದಿಂದ ನಿರ್ಮಿಸಿರುವ ಹಾಲಿನ ಒಕ್ಕೂಟದಲ್ಲಿ ಇಂತಹ ಸರಣಿ ಪ್ರಕರಣಗಳು ನಡೆಯುತ್ತಿರುವುದು ತಂಬ ಕಳವಳಕಾರಿಯಾದ ಸಂಗತಿಯಾಗಿದೆ. ಈ ಮಹಾಮಂಡಳಿಯ ನಿರ್ದೇಶಕರುಗಳು ಹಾಗೂ ಆಡಳಿತ ವರ್ಗ ರೈತರ ಹಿತಾಸಕ್ತಿ ಕಾಪಾಡಬೇಕಾದ ಸಂಸ್ಥೆಯಲ್ಲಿ ಪಾರದರ್ಶಕ ಆಡಳಿತ ಇರಬೇಕು. ಹಾಲಿನ ಉತ್ಪನ್ನಗಳ ಗುಣಮಟ್ಟ ಕಾಪಾಡುವುದು ಸಂಸ್ಥೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು ಮಹಾಮಂಡಳಿಯ ಆಡಳಿತ ಜನ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಹಣದ ಆಮಿಷಕ್ಕೆ ಒಳಗಾಗದೆ, ಪ್ರಾಮಾಣಿಕವಾಗಿ ರೈತರ ಹಿತಾಸಕ್ತಿಗಾಗಿ ಕೆಲಸ ಮಾಡುವ ಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.

ಮನ್’ಮುಲ್‌ನಲ್ಲಿ ನಡೆದಿರುವ ಸರಣಿ ಪ್ರಕರಣಗಳ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಕರಣಗಳ ಉನ್ನತ ತನಿಖೆಗಾಗಿ ಸಿಬಿಐಗೆ ವಹಿಸಬೇಕು. ಜೊತೆಗೆ, ಪ್ರಸ್ತುತ ಆಡಳಿತ ಮಂಡಳಿಯನ್ನು ವಿಸರ್ಜಿಸಿ, ಹೊಸ ಸಮಿತಿಯನ್ನು ರಚಿಸುವ ಮೂಲಕ ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕ ಆಡಳಿತಕ್ಕೆ ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಗೆಜ್ಜಲಗೆರೆ ಹಾಲಿನ ಡೈರಿಯ ಮಹಾಮಂಡಳಿಯ ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಒಳಗಾಗದೆ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ರೈತರಿಗೆ ನ್ಯಾಯ ದೊರಕಿಸುವುದರ ಜೊತೆಗೆ ಹಾಲಿನ ಗುಣಮಟ್ಟ ಮತ್ತು ಸಾರ್ವಜನಿಕರ ಆರೋಗ್ಯವನ್ನು ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ KRS ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಸೋಮಸುಂದರ್ ಕೆ.ಎಸ್, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ರಮೇಶ್ ಗೌಡ, ಅರುಣ ಕುಮಾರ ಹೆಚ್ ಮಲ್ಲೇಗೌಡ, ರಾಜ್ಯ ರೈತ ಘಟಕದ ಅಧ್ಯಕ್ಷ ಜೋಗನಹಳ್ಳಿ ಗುರುಮೂರ್ತಿ, ರಾಜ್ಯ ಯುವ ಘಟಕದ ಕಾರ್ಯದರ್ಶಿ ಪ್ರಮೋದ್ ಎಸ್., ಜಿಲ್ಲಾಧ್ಯಕ್ಷ ಮಲ್ಲೇಶ‌ ಹೆಬ್ಬಕವಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್, ಜಿಲ್ಲಾ ಉಪಾಧ್ಯಕ್ಷ ಮಹೇಶ್ ಕೂಳಗೆರೆ, ಜಿಲ್ಲಾ ಯುವ ಘಟಕದ ಅಧ್ಯಕ್ಷೆ ದೀಪಿಕಾ, ಅನಿತಾ, ಮಂಡ್ಯ ಜಿಲ್ಲಾ ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಜಯರಾಮ್, ಮದ್ದೂರು ತಾಲ್ಲೂಕು ಅಧ್ಯಕ್ಷ ಮಹದೇವ್, ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕುಮಾರ್ ಸೇರಿದಂತೆ ಪಕ್ಷದ ಮಂಡ್ಯ ಮೈಸೂರು ಚಾಮರಾಜನಗರ ಜಿಲ್ಲೆಯ ಹಲವು ತಾಲೂಕಿನ ಪದಾಧಿಕಾರಿಗಳು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!