ಬೆಂಗಳೂರು:ಫೆ.೨೮.ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಫ್. ಎಸ್ .ಎಲ್ ವರದಿ ಬಂದ ನಂತರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೂಗುವವರಿಗೆ ವಿಧಾನಸೌಧ ಆದರೇನು? ಬೇರೆ ಎಲ್ಲಾದರೇನು? ಅಪರಾಧ ಅಪರಾಧವೇ.
ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಬೀತಾದರೆ ಯಾರೇ ಆಗಲಿ ಅಂಥವರ ಮೇಲೆ ಕಠಿಣ ಕ್ರಮ ವಹಿಸಲಾಗುವುದು ಎಂದು ಖಡಕ್ ಸೂಚನೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಸುಳ್ಳು ಸುದ್ದಿ ಹರಡುವ ಮೀಡಿಯಾಗಳ ಮೇಲೂ ಕ್ರಮಕ್ಕೆ ಆಗ್ರಹಿಸಿದ್ದಾರೆ