Sunday, May 19, 2024
spot_img

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಅಗತ್ಯ ನೆರವು ಕೋರಿ ಫಿಎಂ ಗೆ ಸಿಎಂ ಪತ್ರ

ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಅಗತ್ಯ ನೆರವು ಕೋರಿ ಪ್ರಧಾನಿಗೆ ಪತ್ರ

ಬೆಂಗಳೂರು:ಮೇ.೧. ಮಹಿಳೆಯರ ಮೇಲಿನ ಅತ್ಯಾಚಾರ ಲೈಂಗಿಕ ಕಿರುಕುಳ ಆರೋಪ ಎದುರಿಸಿ ಸದ್ಯ ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಅಗತ್ಯ ನೆರವು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ಮಹಿಳಾ ದೌರ್ಜನ್ಯದಂತಹ ಗುರುತರ ಆರೋಪ ಹೊತ್ತಿರುವ ಹಾಲಿ‌ ಸಂಸದ ಹಾಗೂ ಎನ್‌ಡಿಎ ಮೈತ್ರಿಕೂಟದ ಲೋಕಸಭಾ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ಈಗಾಗಲೆ ವಿಶೇಷ ತನಿಖಾ ತಂಡ ರಚಿಸಿದೆ.

ಈ ನಡುವೆ ಆರೋಪಿಯು ರಾಜತಾಂತ್ರಿಕ ಪಾಸ್‌ಪೋರ್ಟನ್ನು ಬಳಕೆ ಮಾಡಿಕೊಂಡು ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ. ಎಸ್.ಐ.ಟಿ ಯು ತನಿಖೆಯನ್ನು ಮುಂದುವರೆಸಬೇಕಾದರೆ ಆರೋಪಿಯ ವಿಚಾರಣೆ ನಡೆಸುವ ಅಗತ್ಯವಿದೆ. ಹಾಗಾಗಿ ವಿದೇಶಾಂಗ ಸಚಿವಾಲಯ ಮತ್ತು ಗೃಹ ಸಚಿವಾಲಯಗಳು ತಕ್ಷಣ ಕಾರ್ಯಪ್ರವೃತ್ತವಾಗಿ ರಾಜತಾಂತ್ರಿಕ ಪಾಸ್‌ಪೋರ್ಟ್ ಹಿಂಪಡೆಯುವ ಜೊತೆಗೆ ಅಂತಾರಾಷ್ಟ್ರೀಯ ಪೊಲೀಸ್ ಏಜೆನ್ಸಿಗಳನ್ನು ಬಳಸಿಕೊಂಡು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಅವರನ್ನು ಮರಳಿ ಭಾರತಕ್ಕೆ ಕರೆತರಲು ನೆರವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

 

೨೪ ಗಂಟೆಯೊಳಗೆ ವಿಚಾರಣೆಗೆ‌ಹಾಜರಾಗುವಂತೆ ಎಸ್ ಐ ಟಿ ನೀಡಿರುವ ನೋಟಿಸಿಗೆ ವಕೀಲರ ಮೂಲಕ ಉತ್ತರಿಸಿರುವ ಪ್ರಜ್ವಲ್ ಏಳು ದಿನಗಳ ಸಮಯಾವಕಾಶ ಕೋರಿದ್ದಾರೆ

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!