Friday, May 9, 2025
spot_img

ಮಂಡ್ಯ ಮಿಮ್ಸ್ ಮೇಲ್ದರ್ಜೆಗೆ ಕ್ರಮ:ಚಲುವರಾಯಸ್ವಾಮಿ

ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೆರಿಸಲು ಕ್ರಮ.. ಎನ್.ಚಲುವರಾಯಸ್ವಾಮಿ

ಬೆಂಗಳೂರು, ಮಾರ್ಚ್, 06

ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೆರಿಸುವ ಜೊತೆಗೆ ನವೀಕರಣ ಕಾಮಗಾರಿಗಳಿಗೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿಯವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣು ಪ್ರಕಾಶ್ ಪಾಟೇಲ್ ತಿಳಿಸಿದ್ದಾರೆ..

ವಿಕಾಸಸೌಧದ ಸಮಿತಿ ಕೊಠಡಿಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿಯವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ನೇತ್ರತ್ವದಲ್ಲಿ ನಡೆದ ಮಂಡ್ಯ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಅಭಿವೃದ್ದಿ ಕುರಿತು ವಿಸ್ತೃತ ಚರ್ಚೆ ನಡೆಸಿದ ನಂತರ ಉಭಯ ಸಚಿವರು, ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ, ಎಲ್ಲಾ ರೀತಿಯ ಅಗತ್ಯ ನೆರವು ನೀಡುವ ಭರವಸೆ ನೀಡಿದರು..

ಹಾಲಿ ಆಸ್ಪತ್ರೆಯಲ್ಲಿ 400 ಹಾಸಿಗೆಗಳಿಗೆ ಅನುಮೋದನೆ ಇದ್ದರೂ ಸಹ 800 ಕ್ಕೂ ಅಧಿಕ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಇದನ್ನು 850 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆರಿಸುವ ಅಗತ್ಯ ಇದೆ ಎಂದು ಸಭೆಯಲ್ಲಿ ಸಚಿವರಾದ ಚಲುವರಾಯಸ್ವಾಮಿಯವರು ಗಮನ ಸೇಳೆದರು..

ಇದಕ್ಕೆ ಉತ್ತರಿಸಿದ ವೈದ್ಯಕೀಯ ಶಿಕ್ಷಣ ಸಚಿವರು, ಪರಿಸರ ಇಲಾಖೆ ಪರವಾನಗಿ ನವೀಕರಿಸಿ ಮೇಲ್ದರ್ಜೆಗೆರಿಸಲು ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ತಿಳಿಸಿದರು.

ಇದೇ ರೀತಿ ವಿದ್ಯಾರ್ಥಿಗಳ ಸಂಖ್ಯೆಯನ್ನು 200 ರಿಂದ 250 ಕ್ಕೆ ಹೆಚ್ಚಿಸುವಂತೆ ಕೃಷಿ ಸಚಿವರಾದ ಚಲುವರಾಯಸ್ವಾಮಿಯವರು ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಮಾಡಿದರು..

ಇದೇ ರೀತಿ ತುರ್ತು ಚಿಕಿತ್ಸಾ ಘಟಕ ಹಾಗೂ ಲಘು ಶಸ್ತ್ರ ಚಿಕಿತ್ಸಾ ಘಟಕಗಳ ಕೊಠಡಿ ನಿರ್ಮಾಣ/ನವೀಕರಣ, ಕ್ಯಾನ್ಸರ್ ಚಿಕಿತ್ಸಾ ಘಟಕ, ಲಾಂಡ್ರಿ ಸೌಲಭ್ಯ, ಹೆಚ್ಚುವರಿ ಕೊಠಡಿಗಳ ನಿರ್ಮಾಣ, ವಿದ್ಯುತ್ ಪೂರೈಕೆ ಸೇರಿದಂತೆ ಆಸ್ಪತ್ರೆಗೆ ಅಗತ್ಯವಿರುವ ಎಲ್ಲಾ ಕಾಮಗಾರಿಗಳನ್ನು ಪಟ್ಟಿ ಮಾಡಿ ವಿಸ್ತೃತ ಯೋಜನೆಯ ಪ್ರಸ್ತಾವನೆ ಸಲ್ಲಿಸುವಂತೆ ಸಚಿವರಾದ ಚಲುವರಾಯಸ್ವಾಮಿಯವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ್ ಪ್ರಕಾಶ್ ಪಾಟೀಲ್ ರವರು ಆಸ್ಪತ್ರೆಯ ಅಧಿಕಾರಿಗಳಿಗೆ ತಿಳಿಸಿದರು..

ಇನ್ನೂ ಸಭೆಯಲ್ಲಿ ಭಾಗವಹಿಸಿದ್ದ ಶ್ರೀರಂಗಪಟ್ಟಣ ಶಾಸಕರು, ಚೆಸ್ಕಾಂ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ ಹಾಗೂ ಮಂಡ್ಯ ಶಾಸಕ ರವಿಕುಮಾರ್ ಗಣಿಗರವರು ಮಂಡ್ಯ ವೈದ್ಯಕೀಯ ಕಾಲೇಜಿನ ಅಭಿವೃದ್ಧಿ ಬಗ್ಗೆ ಸಲಹೆ ಸೂಚನೆ ನೀಡಿದರು..

ಈ ಬಗ್ಗೆ ಮೇಲ್ವಿಚಾರಣೆ ವಹಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ರವರಿಗೆ ಸಚಿವರು ಸೂಚಿಸಿದರು..

ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹಮದ್ ಮೊಹಿಸಿನ್, ಮಂಡ್ಯ ವೈದ್ಯಕೀಯ ಕಾಲೇಜು ನಿರ್ದೇಶಕ ಹಾಗೂ ಇತರೆ ಅಧಿಕಾರಿಗಳು ಭಾಗವಹಿಸಿದ್ದರು..

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!