ಶಿರಸಿ : ಕೆಲಸ ಮಾಡಿಕೊಡುವುದಾಗಿ ವ್ಯಕ್ತಿಯೋರ್ವನಿಂದ 60 ಸಾವಿರ ಲಂಚ ಪಡೆಯುತ್ತಿರುವಾಗ ಹಣದ ಸಮೇತ ಹೊನ್ನಾವರದ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಪ್ರವೀಣ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಎಸ್ ಪಿ ಕುಮಾರ ಚಂದ್ ಮಾರ್ಗದರ್ಶನದಲ್ಲಿ ಕಾರವಾರದ ಲೋಕಾಯುಕ್ತ ಇಸ್ಪೆಕ್ಟರ್ ವಿನಾಯಕ್ ಬಿಲ್ಲವ ರವರ ನೇತ್ರತ್ವದಲ್ಲಿ ದಾಳಿ ನಡೆದಿದ್ದು ಹಣದ ಸಮೇತ
ಕಚೇರಿಯಲ್ಲಿ ವಶಕ್ಕೆ ಪಡೆದು ಹೊನ್ನಾವರ ಪಟ್ಟಣ ಪಂಚಾಯತಿ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶಿಲಿಸುತಿದ್ದು ,ಕಾರವಾರ ಲೋಕಾಯುಕ್ತ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.