ಲಿಂಗಸುಗೂರು: ಹಣ ದುರ್ಬಳಕೆ ಮಾಡಿ ಕರ್ತವ್ಯ
ಲೋಪ ಎಸಗಿದ ಆರೋಪದಡಿ ಪುರಸಭೆ ಮುಖ್ಯಾಧಿಕಾರಿ ರೆಡ್ಡಿರಾಯನಗೌಡರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಅಮಾನತುಗೊಂಡ ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ ಮೂಲ ಹುದ್ದೆ ಹಿರಿಯ ಆರೋಗ್ಯ ನಿರೀಕ್ಷಕರಾಗಿದ್ದಾರೆ. ಈ ಹಿಂದೆ ಮಸ್ಕಿ ಪುರಸಭೆಯ ಮುಖ್ಯಾಧಿಕಾರಿಕಾರಿಯಾಗಿದ್ದರು.
ಮಸ್ಕಿ ಪುರಸಭೆ ಕಚೇರಿಗೆ ಪೀಠೋಪಕರಣಗಳ ಅಳವಡಿಕೆಗೆ 57.64 ಲಕ್ಷ ಮೊತ್ತದ ಕಾಮಗಾರಿ ನಿರ್ವಹಣೆಯಲ್ಲಿ ಸರ್ಕಾರದ ನಿಯಮ ಪಾಲಿಸದೇ ಕರ್ತವ್ಯಲೋಪ ಎಸಗಿದ್ದಾರೆ. ಮೇಲ್ನೋಟಕ್ಕೆ ಹಣ ದುರ್ಬಳಕೆ ಮಾಡಿರುವುದು ಖಚಿತಗೊಂಡಿರುವ ಹಿನ್ನೆಲೆಯಲ್ಲಿ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.