ಮಂಡ್ಯ: ಸೆ.೧೭ಮೈಸೂರು- ಕುಶಾಲನಗರ ನಡುವಿನ ರಾಷ್ಟೀಯ ಹೆದ್ದಾರಿ 275ನ್ನು ಮೇಲ್ದರ್ಜೆಗೆ ಏರಿಸುವ ಕಾಮಗಾರಿಯ ಕುಂದು ಕೊರತೆಗಳನ್ನು ಆಲಿಸಲು ಸೆ.19ರಂದು ಬೆಳಗೊಳದ ಆಂಜನೇಯ ದೇವಾಲಯದ ಬಳಿ ಬೆಳಿಗ್ಗೆ 10 ಗಂಟೆಗೆ ರೈತರ ಸಭೆ ಕರೆಯಲಾಗಿದೆ ಎಂದು ರೈತ ಮುಖಂಡ ಬೆಳಗೊಳ ಸುನೀಲ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು- ಕುಶಾಲನಗರ ನಡುವೆ ನಡೆಯುತ್ತಿರುವ ರಾಷ್ಟ್ರೀಯ
ಕಾಮಗಾರಿಯಲ್ಲಿ ಸ್ಥಳೀಯರ ಅನುಕೂಲಕ್ಕಾಗಿ ಸವೀರ್ಸ್ ರಸ್ತೆ ನೀಡದೇ ತರಾತುರಿಯಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದ ರೈತರಿಗೆ ಸಮಸ್ಯೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಈ ಹಿಂದೆ ಜಿಲ್ಲಾಧಿಕಾರಿ, ಶ್ರೀರಂಗಪಟ್ಟಣ ಶಾಸಕ ಹಾಗೂ ರಾಷ್ಟೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸಭೆ ನಡಸಿ ಹೆದ್ದಾರಿಯ ಇಕ್ಕೆಲದಲ್ಲಿ ಸರ್ವೀಸ್ ರಸ್ತೆ ಇರಲಿದೆ ಎಂದು ಭರವಸೆ ನೀಡಿದ್ದರು.
ಆದರೆ ಇದೀಗ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಯೋಜನೆಯ ಡಿಪಿಆರ್ನಲ್ಲಿ ಸರ್ವೀಸ್ ರಸ್ತೆ ಸೌಲಭ್ಯ ಇರುವುದಿಲ್ಲ ಎಂಬುದು ನಮ್ಮ ಗಮನಕ್ಕೆ ಬಂದಿದೆ ಎಂದು ಹೇಳಿದರು.
ವಿಷಯವನ್ನು ಶಾಸಕರ ಗಮನಕ್ಕೆ ತರಲಾಗಿ ಶಾಸಕರು ಸಭೆ ನಡೆಸಿ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದ ಪರವಾಗಿ ಮಾತನಾಡಿದ್ದು ರೈತರಲ್ಲಿ ಅಸಮಾಧಾನ ಮೂಡಿಸಿತ್ತು. ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಬಳಿ ಸಮಸ್ಯೆ ಹೇಳಿಕೊಂಡ ಹಿನ್ನಲೆ ಸ್ಥಳದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದರು. ಸಚಿವರು ಸಮಸ್ಯೆ ಆಲಿಸಿ ದೆಹಲಿಗೆ ಬರಲು ಹೇಳಿ, ಅನಾರೋಗ್ಯದ ನಡುವೆಯೂ ರೈತರ ಸಮಸ್ಯೆ ಆಲಿಸಿದರು ಎಂದರು.
ಸಮಸ್ಯೆ ಆಲಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸಮಸ್ಯೆಯ ಮನವರಿಕೆ ಮಾಡಿದ ಹಿನ್ನಲೆ. ಸಮಸ್ಯೆ ಬಗೆಹರಿಸುವ ಸಲುವಾಗಿ ರಾಷ್ಟೀಯ ಹೆದ್ದಾರಿ ಪ್ರಾಧಿಕಾರಿಗಳಿಗೆ ನಿತಿನ್ ಗಡ್ಕರಿ ಸೂಚನೆ ಮೇರೆಗೆ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ನೇತೃತ್ವದಲ್ಲಿ ಸಭೆ ಏರ್ಪಡಿಸಲಾಗಿದೆ. ಹೆದ್ದಾರಿಗೆ ಭೂಮಿ ನೀಡಿದ ರೈತರು ಸಭೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಹೋರಾಟಗಾರ ಚಂದನ್, ರೈತ ಮುಖಂಡರಾದ ಅಶ್ವತ್ ನಾರಾಯಣ್, ಗಿರೀಶ್, ಸುನಿಲ್, ಪ್ರಭಾಕರ್ ಇದ್ದರು.


