ಮಂಡ್ಯ: ಮಾ:೨೭.ಸೌಜನ್ಯ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ, ಸೌಜನ್ಯ ಆತ್ಮಕ್ಕೆ ಶಾಂತಿ ಕೋರುವ ಸಲುವಾಗಿ ಕರ್ನಾಟಕ ರಾಜ್ಯ ರೈತ ಸಂಘಗಳ ಏಕೀಕರಣ ಸಮಿತಿಯ ವತಿಯಿಂದ ಏಪ್ರಿಲ್ ೦೪ರಂದು ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ಪಚ್ಚೆ ನಂಜುಂಡಸ್ವಾಮಿ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಅಪರಾಧಿಯನ್ನು ದೋಷ ಮುಕ್ತಗೊಳಿಸಿದ್ದು, ನಿಜವಾದ ಅಪರಾಧಿ ಯಾರು ಎಂಬುದನ್ನು ಪತ್ತೆ ಹಚ್ಚುವಂತೆ ಒತ್ತಾಯಿಸಲಾಗುವುದು ಎಂದರು.
ಕೃತ್ಯ ನಡೆದ ಸಮಯ ಸಾಕ್ಯಾಧಾರ ಕಲೆ ಹಾಕದೇ ಕರ್ತವ್ಯ ಲೋಪ ಎಸಗಿದ ಪೊಲೀಸ್, ಸಿಐಟಿ, ಸಿಬಿಐ ಅಧಿಕಾರಿಗಳನ್ನು ವಶಕ್ಕೆ ಪಡೆದು, ಬ್ರೈನ್ ಮ್ಯಾಪಿಂಗ್ ಮಾಡಿ ಸತ್ಯಾಸತ್ಯತೆ ಹೊರತಂದು ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ರಾಜ್ಯಾಧ್ಯಂತ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಸದರಿ ಹೋರಾಟದಲ್ಲಿ ಗಿರೀಶ್ ಮಟ್ಟಣ್ಣನವರ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಗೌರವಾಧ್ಯಕ್ಷರನ್ನಾಗಿ ಮದ್ದೂರು ರಾಮಕೃಷ್ಣಯ್ಯ, ರಾಜ್ಯ ಕಾಯಾಧ್ಯಕ್ಷರಾಗಿ ವಿದ್ಯಾಸಾಗರ್ ರಾಮೇಗೌಡ, ರಾಜ್ಯ ಉಪಾಧ್ಯಕ್ಷರು, ಜಿಲ್ಲಾಧ್ಯಕ್ಷರಾಗಿ ಇಂಡುವಾಳು ಚಂದ್ರಶೇಖರ್, ರಾಜ್ಯ ಉಪಾಧ್ಯಕ್ಷರುಗಳಾಗಿ ಶಂಬೂನಹಳ್ಳಿ ಸುರೇಶ್, ಮನು ಸೋಮಯ್ಯ, ಅಣ್ಣೂರು ಮಹೇಂದ್ರ, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಮಂಜೇಶ್‌ಗೌಡ, ಕೀಳಘಟ್ಟ ನಂಜುಂಡಯ್ಯ, ಸೋ.ಸಿ.ಪ್ರಕಾಶ್, ಉಮೇಶ್ ಮದ್ದೂರು, ಶಿವಳ್ಳಿ ಚಂದ್ರಶೇಖರ್, ರಾಮಲಿಂಗೇಗೌಡ, ಸಂತೋಷ್ ಮಂಡ್ಯಗೌಡ ಅವರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ರಾಜ್ಯಾದ್ಯಂತ ಶೀಘ್ರವಾಗಿ ವಿಸ್ತರಿಸಲಾಗುವುದು ಎಂದು ಮಾಹಿತಿ ನೀಡಿದರು
ಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಳ್ಳಿ ಚಂದ್ರಶೇಖರ್, ಅಣ್ಣೂರು ಮಹೇಂದ್ರ, ಸಂತೋಷ್ ಮಂಡ್ಯಗೌಡ, ಪಣಕನಹಳ್ಳೀ ನಾಗಣ್ಣ, ಚಿಕ್ಕಮರಿಗೌಡ, ಮರಿಚನ್ನೇಗೌಡ ಇದ್ದರು.