ಮುಂದಿನ 2028 ಕ್ಕೆ ನಾನೇ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಆಗುವುದು ಖಚಿತ. ಅದೇ ರೀತಿ ನಾನು ಶಾಸಕ ಆಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಕೆಲವು ಊಹಾಪೋಹಗಳಿಗೆ ಯಾರೂ ಕಿವಿಗೊಡಬಾರದು* ಎಂದು ಕೃಷ್ಣರಾಜ ಪೇಟೆ ಶಾಸಕ ಎಚ್ ಟಿ ಮಂಜು ಘೋಷಣೆ ಮಾಡಿದರು. . ಶಾಸಕರ ಈ ಹೇಳಿಕೆ ಕಾರ್ಯಕರ್ತರಲ್ಲಿ ಹರ್ಷ ಮೂಡಿಸಿದೆ. ಕ್ಷೇತ್ರದ ಅಭಿವೃದ್ದಿಗೆ ಕಾಂಗ್ರೆಸ್ ಸರಕಾರವು ನಿರೀಕ್ಷಿತ ಅನುಧಾನ ನೀಡುತ್ತಿಲ್ಲ. ಇದರಿಂದ ಕ್ಷೇತ್ರದ ಅಭಿವೃದ್ದಿಯು ನನ್ನ ಹಾಗೂ ಕ್ಷೇತ್ರದ ಮತದಾರರ ನಿರೀಕ್ಷೆಗೆ ತಕ್ಕಂತೆ ಆಗುತ್ತಿಲ್ಲ. ಕ್ಷೇತ್ರದ ಸಮಗ್ರ ಅಭಿವೃದ್ದಿ ದೃಷ್ಟಿಯಿಂದ ನನಗೆ ಇನ್ನೊಂದು ಅವಧಿಗೆ ಅವಕಾಶ ನೀಡಬೇಕಾಗಿದೆ. ನಾನು ನನ್ನ ಶತ್ರುವಿಗೂ ಕೇಡು ಬಯಸುವುದಿಲ್ಲ. ನನ್ನ ವಿರುದ್ದ ಯಾರೇ ಕೆಟ್ಟದಾಗಿ ಮಾತನಾಡಿದರೂ ಅದನ್ನು ಪ್ರೀತಿಯಿಂದಲೇ ಸ್ವೀಕರಿಸುತ್ತೇನೆ ಟೀಕಿಸುವವರ ಮನಸ್ಸು ಗೆಲ್ಲುವಂತೆ ಕ್ಷೇತ್ರದ ಅಭಿವೃದ್ಧಿ ಮಾಡಬೇಕೆಂಬುದು ನನ್ನ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಅಕ್ಕಿಹೆಬ್ಬಾಳು ಹೋಬಳಿ ಜೆಡಿಎಸ್ ಅಧ್ಯಕ್ಷ ಬಸವಲಿಂಗಪ್ಪ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಕೃಷ್ಣೇಗೌಡ, ಬೀರುವಳ್ಳಿ ಸೊಸೈಟಿ ಅಧ್ಯಕ್ಷ ಎನ್.ಎನ್.ಜಗದೀಶ್, ನಟೇಶ್, ಈರೇಗೌಡ, ಲಕ್ಷ್ಮಣ್, ಬಿ.ಎನ್.ಕುಮಾರ್, ಪರಶುರಾಮ್, ದೊಡ್ಡಕಾಡನೂರು ಹೇಮಾವತಿ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಾಜೇಶ್, ಸಹಾಯಕ ಇಂಜಿನಿಯರ್ ರವಿ ಕುಮಾರ್, ಬೀರುವಳ್ಳಿ ಗ್ರಾಮ ಪಂಚಾಯತ್ ಪಿಡಿಓ ನಾಯದಾ ಅಖ್ತರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಪ್ರಮುಖ ಮುಖಂಡರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.


