Thursday, January 2, 2025
spot_img

ಮೈಸೂರು:ದಕ್ಷಿಣ ಶಿಕ್ಷಕರ ಕ್ಷೇತ್ರದ ಮತ ಎಣಿಕೆಯಲ್ಲಿ ಜ್ಯಾದಳ ಮುನ್ನಡೆ

ಮೈಸೂರು: ವಿಧಾನಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮುಕ್ತಾಯದ ವೇಳೆಗೆ ಜೆಡಿಎಸ್‌ನ ಕೆ.ವಿವೇಕಾನಂದ 1,278 ಮತಗಳಿಂದ ಮುನ್ನಡೆ ಗಳಿಸಿದ್ದಾರೆ.

ಅವರು 3757 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್‌ನ ಮರಿತಿಬ್ಬೇಗೌಡ ‌2,479 ಮತಗಳನ್ನು ಪಡೆದಿದ್ದಾರೆ.

ಮೊದಲ ಸುತ್ತಿನಲ್ಲಿ 7000 ಮತಗಳ ಎಣಿಕೆ ನಡೆದಿದೆ. ಮಾಜಿ ಶಾಸಕ 36, ವಿಧಾನಪರಿಷತ್ ಮಾಜಿ ಸದಸ್ಯ ಕೆ.ಸಿ. ಪುಟ್ಟಸಿದ್ದಶೆಟ್ಟಿ 11 ಮತಗಳನ್ನಷ್ಟೆ ಪಡೆದಿದ್ದಾರೆ. ನಿವೃತ್ತ ಡಿಡಿಪಿಯು ನಾಗಮಲ್ಲೇಶ್ 165 ಹಾಗೂ ಹ.ರ.ಮಹೇಶ್ 114 ಮತಗಳನ್ನು ಗಳಿಸಿ ಗಮನಸೆಳೆದಿದ್ದಾರೆ.

ಈ ಸುತ್ತಿನಲ್ಲಿ 401 ಮತಗಳು ಕುಲಗೆಟ್ಟ ಮತಗಳಾಗಿವೆ ಎಂದು ಚುನಾವಣಾಧಿಕಾರಿ ಜಿ.ಸಿ. ಪ್ರಕಾಶ್ ತಿಳಿಸಿದ್ದಾರೆ

 

ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆ ವ್ಯಾಪ್ತಿಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರ ಬರಲಿದೆ. ಇಲ್ಲಿ ಒಟ್ಟು 20,549 ಮತದಾರರಿದ್ದು, ಈ ಪೈಕಿ 18,979 ಮತದಾರರು ಮತ ಚಲಾಯಿಸಿದ್ದಾರೆ. ಶೇಕಡಾ 88.07 ಮತದಾನ ಆಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 11 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಯಾ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!