- ಮಂಡ್ಯ: ಜು.೩೦.ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಮಂಡ್ಯ ನಗರಸಭೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರಸಭೆ ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿ ನಿಗದಿತ ಸಮಯದಲ್ಲಿ ನಿಯಮಾನುಸಾರ ಪರಿಶೀಲನೆ ನಡೆಸಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಕಡತಗಳು ಹಾಗೂ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಸವಲತ್ತುಗಳು, ಕರ ಸಂಗ್ರಹಣೆ, ಕಸ ವಿಲೇವಾರಿ ಸೇರಿದಂತೆ ಇನ್ನಿತರೆ ವಿಷಯಗಳನ್ನು ಪರಿಶೀಲಿಸಿದರು.
ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಭೆ ನಡೆಸಿ ಕೆಲಸಗಳ ವಿವರದ ಮಾಹಿತಿ ಪಡೆದುಕೊಂಡರು.
ಇದೇ ಸಂದರ್ಭದಲ್ಲಿ ನಗರಸಭೆ ಆಯುಕ್ತೆ ಪಂಪಶ್ರೀ ಉಪಸ್ಥಿತರಿದ್ದರು.
ಪೌರಕಾರ್ಮಿಕರಿಗೆ ಬಾರದ ಸಂಬಳ: ಮಂಡ್ಯ ನಗರದಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಕಳೆದ ಎರಡು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ.ಈ ಕುರಿತು ಆಯುಕ್ತೆ ಪಂಪಶ್ರೀಯವರನ್ಮು ಕಾರ್ಮಿಕ ಮುಖಂಡರು ವೇತನಕ್ಕಾಗಿ ಆಗ್ರಹಿಸಿದ್ದು.ಅವರು ಈ ಕುರಿತು ವೇತನ ವಿಳಂಬಕ್ಕೆ ಆರೋಗ್ಯ ನಿರೀಕ್ಷಕರು ಪರಿಸರ ಅಭಿಯಂತರರು ಕಾರಣವೆಂದು ನುಣುಚಿಕೊಂಡಿದ್ದಾರೆ ಎನ್ನಲಾಗಿದ್ದು ಈ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲು ಸಂಘದ ಮುಖಂಡರು ನಿರ್ಧರಿಸಿದ್ದಾರೆ.